ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿರುವ ಸಿದ್ದಗಂಗಾ ಶ್ರೀಗಳು: ಐಸಿಯುಗೆ ಶಿಫ್ಟ್

X
TV5 Kannada8 Dec 2018 7:46 AM GMT
ತುಮಕೂರಿನ ಸಿದ್ದಗಂಗಾ ಮಠದ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ ಚೆನ್ನೈನ ರೇಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಶುಕ್ರವಾರ ಚೆನ್ನೈ ರೇಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು ಶನಿವಾರ ಬೆಳಗ್ಗೆ ಯಕೃತ್ ಸೋಂಕಿಗೆ ಎಂಡೋಸ್ಕೋಪಿ ಮಾಡಲಾಯಿತು. ಚಿಕಿತ್ಸೆಗೆ ಶ್ರೀಗಳು ಉತ್ತಮವಾಗಿ ಸ್ಪಂದಿಸುತ್ತಿದ್ದು, ಮಧ್ಯಾಹ್ನ ಐಸಿಯುಗೆ ವರ್ಗಾಯಿಸಲಾಯಿತು ಎಂದು ವೈದ್ಯರು ಬಿಡುಗಡೆ ಮಾಡಿದ ಬುಲೆಟಿನ್ನಲ್ಲಿ ತಿಳಿಸಿದ್ದಾರೆ.
ಸುತ್ತೂರು ಮಠದ ಶ್ರೀಗಳು ಶನಿವಾರ ಬೆಳಗ್ಗೆ ಸಿದ್ದಗಂಗಾ ಶ್ರೀಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಆಸ್ಪತ್ರೆಯಲ್ಲಿ ಕೂಡ ಸಿದ್ದಗಂಗಾ ಶ್ರೀಗಳು ನಡೆದುಕೊಂಡೇ ಓಡಾಡಿದ ಚಿತ್ರಗಳನ್ನು ಆಸ್ಪತ್ರೆ ಬಿಡುಗಡೆ ಮಾಡಿದೆ.
ಶನಿವಾರ ಸಂಜೆ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಸೇರಿದಂತೆ ರಾಜ್ಯದ ಹಲವು ಮುಖಂಡರು ಶ್ರೀಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಲಿದ್ದಾರೆ.
Next Story