Top

ಆರ್​ಬಿಐ ನಿರ್ದೇಶಕ ಸ್ಥಾನಕ್ಕೆ ಊರ್ಜಿತ್ ಪಟೇಲ್ ರಾಜೀನಾಮೆ

ಆರ್​ಬಿಐ ನಿರ್ದೇಶಕ ಸ್ಥಾನಕ್ಕೆ ಊರ್ಜಿತ್ ಪಟೇಲ್ ರಾಜೀನಾಮೆ
X

ಆಡಳಿತದಲ್ಲಿ ಕೇಂದ್ರ ಸರಕಾರ ಮೂಗು ತೂರಿಸುವುದರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಊರ್ಜಿತ್ ಪಟೇಲ್ ರಿಸರ್ವ್​ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ನೋಟ್ ಬ್ಯಾನ್ ನಂತರ ಆರ್ಥಿಕ ಬೆಳವಣಿಗೆ ಕುಸಿತ ಹಾಗೂ ಕೇಂದ್ರ ಸರಕಾರದ ಹಲವು ಯೋಜನೆಗಳಿಗೆ ಹಣ ಪೂರೈಕೆ ಕುರಿತು ಕೇಂದ್ರ ಸರ್ಕಾರ ಮತ್ತು ಆರ್​ಬಿಐ ನಡುವೆ ಭಿನ್ನಾಭಿಪ್ರಾಯ ಉಂಟಾಗಿತ್ತು.

ಆರ್​ಬಿಐ ಆಡಳಿತದಲ್ಲಿ ಕೇಂದ್ರ ಸರಕಾರ ಮೂಗು ತೂರಿಸುತ್ತಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ಊರ್ಜಿತ್​ ಪಟೇಲ್ ಸೋಮವಾರ ಸಂಜೆ ದಿಢೀರನೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಕೇಂದ್ರ ಸರಕಾರದ ಕಾರ್ಯ ವೈಖರಿ ವಿರುದ್ಧ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ.

ವೈಯಕ್ತಿಕ ಕಾರಣಗಳಿಂದ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಊರ್ಜಿತ್ ಪಟೇಲ್ ಹೇಳಿಕೊಂಡಿದ್ದಾರೆ.

Next Story

RELATED STORIES