Top

2 ರಾಜ್ಯಗಳಲ್ಲಿ `ಕೈ’ ಮುನ್ನಡೆ, ಮಧ್ಯಪ್ರದೇಶದಲ್ಲಿ ಬಿಜೆಪಿ ಹೋರಾಟ

2 ರಾಜ್ಯಗಳಲ್ಲಿ `ಕೈ’ ಮುನ್ನಡೆ, ಮಧ್ಯಪ್ರದೇಶದಲ್ಲಿ ಬಿಜೆಪಿ ಹೋರಾಟ
X

ಪಂಚ ರಾಜ್ಯಗಳ ಚುನಾವಣೆ ಪೈಕಿ 2 ರಾಜ್ಯಗಳಲ್ಲಿ ಕಾಂಗ್ರೆಸ್ ಸರಳ ಬಹುಮತದತ್ತ ಸಾಗಿದರೆ, ಮಧ್ಯಪ್ರದೇಶದಲ್ಲಿ ಬಹುಮತ ಪಡೆಯಲು ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಹೋರಾಟ ನಡೆದಿದೆ. ಮಿಜೋರಾಂನಲ್ಲಿ ಎಂಎನ್​ಎಫ್ ಮತ್ತು ತೆಲಂಗಾಣದಲ್ಲಿ ಟಿಆರ್​ಎಸ್​ ಪಕ್ಷಗಳು ಪೂರ್ಣ ಬಹುಮತದೊಂದಿಗೆ ಅಧಿಕಾರದತ್ತ ಹೆಜ್ಜೆ ಹಾಕಿವೆ.

ಕೇಂದ್ರ ಹಾಗೂ ರಾಜ್ಯಗಳಲ್ಲಿನ ಆಡಳಿತ ವಿರೋಧಿ ಅಲೆಗೆ ಬಿಜೆಪಿ ತತ್ತರಿಸಿದ್ದು, ರಾಜಸ್ಥಾನ ಮತ್ತು ಛತ್ತೀಸ್​ಗಢಗಳಲ್ಲಿ ಅಧಿಕಾರ ಕಳೆದುಕೊಂಡಿದೆ. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು 100ಕ್ಕಿಂತ ಹೆಚ್ಚು ಸ್ಥಾನ ಪಡೆದಿದ್ದರೂ ಬಹುಮತಕ್ಕೆ ಅಗತ್ಯವಿರುವ 116 ಸ್ಥಾನಗಳಲ್ಲಿ ಗಳಿಸುವಲ್ಲಿ ಎಡವಿದೆ. ಆದರೆ ಕಾಂಗ್ರೆಸ್​ಗೆ ಬಿಎಸ್​​ಪಿ ಬೆಂಬಲ ನೀಡಿದರೆ ಕಾಂಗ್ರೆಸ್ ಅಧಿಕಾರ ಹಿಡಿಯುವ ಸಾಧ್ಯತೆ ಇದೆ.

ಮುಂದಿನ ಲೋಕಸಭಾ ಚುನಾವಣೆಗೆ ಮುನ್ಸೂಚನೆ ಎಂದೇ ಹೇಳಲಾದ ಪಂಚರಾಜ್ಯ ಚುನಾವಣೆಯಲ್ಲಿ ರಾಜಸ್ಥಾನ ಮತ್ತು ಮಧ್ಯಪ್ರದೇಶಗಳಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡಿದೆ. ಛತ್ತೀಸ್​ಗಢದಲ್ಲಿ 15 ವರ್ಷಗಳ ನಂತರ ಕಾಂಗ್ರೆಸ್ ಸರಳ ಬಹುಮತದೊಂದಿಗೆ ಅಧಿಕಾರ ಪಡೆದಿದೆ. ಇದರೊಂದಿಗೆ ರಾಜಕೀಯ ಚಾಣಕ್ಯ ಅಮಿತ್ ಶಾ ಹಾಗೂ ಮೋದಿ ಆಡಳಿತದ ವಿರೋಧಿ ಅಲೆ ಸ್ಪಷ್ಟವಾಗಿ ಕಂಡು ಬಂದಿದೆ.

ರಾಹುಲ್ ಗಾಂಧಿ ಕಾಂಗ್ರೆಸ್ ಚುಕ್ಕಾಣಿ ಹಿಡಿದ ನಂತರ ವಿಧಾನಸಭಾ ಚುನಾವಣೆಯಲ್ಲಿ ದೊರೆತ ಅತೀ ದೊಡ್ಡ ಜಯ ಇದಾಗಿದೆ. ಇದರಿಂದ ಕಾಂಗ್ರೆಸ್ ಮುಕ್ತ ಮಾಡುತ್ತೇವೆ ಎಂಬ ಬಿಜೆಪಿಯ ಪ್ರಯತ್ನಕ್ಕೆ ದೊಡ್ಡ ಹೊಡೆತ ಬಿದ್ದಂತಾಗಿದೆ. ಇದೇ ವೇಳೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದಲ್ಲಿ ನಡೆಯುತ್ತಿರುವ ಮಹಾಮೈತ್ರಿ ನೈತಿಕ ಬಲ ಹೆಚ್ಚಿದಂತಾಗಿದೆ.

Next Story

RELATED STORIES