ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕಾಂಗ್ರೆಸ್, ಜೆಡಿಎಸ್ ಸಂಸದರು!

X
TV5 Kannada12 Dec 2018 1:17 PM GMT
ಲೋಕಸಭಾ ಉಪಚುನಾವಣೆಯಲ್ಲಿ ಜಯಭೇರಿ ಬಾರಿಸಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ಸಂಸದರಾದ ವಿ.ಎಸ್. ಉಗ್ರಪ್ಪ ಮತ್ತು ಶಿವರಾಮೇಗೌಡ ಬುಧವಾರ ಸಂಸದರಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ನ ವಿ.ಎಸ್. ಉಗ್ರಪ್ಪ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ನ ಶಿವರಾಮೇಗೌಡ 1 ಲಕ್ಷಕ್ಕೂ ಅಧಿಕ ಮತಗಳಿಂದ ಜಯಭೇರಿ ಬಾರಿಸಿದ್ದರು.
ಚಳಿಗಾಲದ ಸಂಸತ್ ಅಧಿವೇಶನ ಮಂಗಳವಾರದಿಂದ ಆರಂಭಗೊಂಡಿದ್ದು, ಬುಧವಾರ ಬೆಳಗ್ಗೆ ಈ ಇಬ್ಬರು ಕನ್ನಡದಲ್ಲಿ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಉಗ್ರಪ್ಪ ಮತ್ತು ಶಿವರಾಮೇಗೌಡ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
Next Story