Top

ಮಧ್ಯಪ್ರದೇಶದಲ್ಲಿ ಕೈಗೆ `ಆನೆ' ಬಲ

ಮಧ್ಯಪ್ರದೇಶದಲ್ಲಿ ಕೈಗೆ `ಆನೆ ಬಲ
X

ಆಡಳಿತಾರೂಢ ಬಿಜೆಪಿಯನ್ನು ಸೋಲಿಸಿದ್ದರೂ ಬಹುಮತನಕ್ಕೆ ಕೆಲವೇ ಸ್ಥಾನಗಳ ಕೊರತೆ ಎದುರಿಸುತ್ತಿರುವ ಕಾಂಗ್ರೆಸ್​ಗೆ ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಬಹುಜನ ಸಮಾಜವಾದಿ ಪಕ್ಷ ಬೆಂಬಲ ಘೋಷಿಸಿದೆ. ಈ ಮೂಲಕ ಈ ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬರುವುದು ಖಚಿತವಾಗಿದೆ.

ದೆಹಲಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಬಿಎಸ್​ಪಿ ನಾಯಕಿ ಮಾಯಾವತಿ ಕಾಂಗ್ರೆಸ್​ಗೆ ಈ ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿಯಲು ಬೆಂಬಲ ನೀಡುವುದಾಗಿ ಘೋಷಿಸಿದರು.

ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ಏಕೈಕ ಉದ್ದೇಶದಿಂದ ನಾವು ಕಾಂಗ್ರೆಸ್​ಗೆ ಬೆಂಬಲ ನೀಡಲು ತೀರ್ಮಾನಿಸಿದ್ದೇವೆ ಎಂದು ಮಾಯಾವತಿ ತಿಳಿಸಿದರು.

ಮಧ್ಯಪ್ರದೇಶದಲ್ಲಿ ಬಹುಮತಕ್ಕೆ 116 ಸ್ಥಾನಗಳ ಅಗತ್ಯವಿದ್ದು, ಕಾಂಗ್ರೆಸ್ 114 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದೆ. ಬಿಎಸ್​ಪಿ 2 ಸ್ಥಾನಗಳನ್ನು ಗೆದ್ದುಕೊಂಡಿದೆ. ಬಿಎಸ್​ಪಿ ಬೆಂಬಲದೊಂದಿಗೆ ಕಾಂಗ್ರೆಸ್ ಅಧಿಕಾರ ಹಿಡಿಯುವುದು ಬಹುತೇಕ ಖಚಿತವಾಗಿದೆ. ಬಿಜೆಪಿ 109 ಸ್ಥಾನ ಗೆದ್ದಿದ್ದು ಅಧಿಕಾರ ಹಿಡಿಯುವ ಯಾವುದೇ ಅವಕಾಶ ಹೊಂದಿಲ್ಲ.

Next Story

RELATED STORIES