ಮೀಟೂ ಪ್ರಕರಣದಿಂದ ಅರ್ಜುನ್ ಸರ್ಜಾ ಕ್ಲೀನ್ಚಿಟ್?

X
TV5 Kannada13 Dec 2018 7:45 AM GMT
ನಟಿ ಶ್ರುತಿ ಹರಿಹರನ್ ಮೀಟು ಪ್ರಕರಣದಲ್ಲಿ ಪೊಲೀಸರು ಸಾಕ್ಷ್ಯಗಳ ಕೊರತೆ ಹಿನ್ನೆಲೆಯಲ್ಲಿ ಬಿ ರಿಪೋರ್ಟ್ ಸಲ್ಲಿಸುವ ಬಗ್ಗೆ ಚಿಂತನೆ ನಡೆಸಿದ್ದು, ನಟ ಅರ್ಜುನ್ ಸರ್ಜಾ ಅವರಿಗೆ ಕ್ಲೀನ್ಚಿಟ್ ಸಲ್ಲಿಸುವ ಸಾಧ್ಯತೆ ಇದೆ.
ಪ್ರಕರಣ ಕುರಿತು ಅವಧಿಗೂ ಮುನ್ನವೇ ಬಿ ರಿಪೋರ್ಟ್ ಸಲ್ಲಿಸಲು ಮುಂದಾಗಿದ್ದಾರೆ ಎನ್ನಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿ ಸುಮಾರು 40 ಸಾಕ್ಷಿಗಳ ವಿಚಾರಣೆ ನಡೆಸಲು ಉದ್ದೇಶಿಸಲಾಗಿತ್ತು. ಆದರೆ ಅರ್ಜುನ್ ಸರ್ಜಾ ಸೇರಿದಂತೆ ಹತ್ತಕ್ಕೂ ಹೆಚ್ಚು ಸಾಕ್ಷಿಗಳ ವಿಚಾರಣೆ ನಡೆಸಲಾಗಿದೆ. ಸೂಕ್ತ ಸಾಕ್ಷ್ಯ ಲಭಿಸದ ಹಿನ್ನೆಲೆಯಲ್ಲಿ ಅರ್ಜುನ್ ಸರ್ಜಾಗೆ ಕ್ಲೀನ್ ಚಿಟ್ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ.
ಸಾಕ್ಷಿಗಳ ಕೊರತೆಯಿಂದ ತನಿಖೆಗೆ ಹಿನ್ನಡೆಯಾಗಿದೆ. ಚಿತ್ರರಂಗದಲ್ಲಿ ಭಾರೀ ಕೋಲಾಹಲ ಸೃಷ್ಟಿಸಿದ ಮೀಟೂ ಪ್ರಕರಣ ಯಾವುದೇ ತಾರ್ಕಿಕ ಅಂತ್ಯಕ್ಕೆ ಬಾರದೇ ಕೊನೆಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
Next Story