Top

ಪ್ರಸಾದ ಸೇವಿಸಿದ್ದ ಮೂವರು ಭಕ್ತರ ಸಾವು, 40 ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

ಪ್ರಸಾದ ಸೇವಿಸಿದ್ದ ಮೂವರು ಭಕ್ತರ ಸಾವು, 40 ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ
X

ದೇವರ ಪ್ರಸಾದ ಸೇವಿಸಿ ಭಕ್ತರು ಅಸ್ವಸ್ಥಗೊಂಡು ಆಸ್ಪತ್ರೆ ಸೇರಿದ್ದ ಪ್ರಕರಣದಲ್ಲಿ ಮೂವರ ಮೃತಪಟ್ಟಿರುವ ಘಟನೆ ಚಾಮರಾಜನಗರದ ಹನೂರು ತಾಲ್ಲೂಕಿನ ಸುಳ್ವಾಡಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ಸುಮಾರು 40 ಕ್ಕೂ ಹೆಚ್ಚು ಭಕ್ತರು ಅಸ್ವಸ್ಥಗೊಂಡಿದ್ದು, ಇದೀಗ ಕೊಳ್ಳೆಗಾಲದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಇನ್ನೂ ಇದೀಗ ಮೂವರ ಮೃತಪಟ್ಟಿದ್ದಾರೆ. ಪಾಪಾಣ್ಣ, ಶಾಂತ, ಗೋಪಿಯಮ್ಮ ಮೃತ ದುರ್ದೈವಿಗಳಾಗಿದ್ದಾರೆ.

ಗ್ರಾಮದ ಕಿಚ್ಚುಗುತ್ತಿ ಮಾರಮ್ಮನ ದೇವಸ್ಥಾನದಲ್ಲಿ ಘಟನೆ ಸಂಭವಿಸಿದ್ದು, ಶುಕ್ರವಾರದ ವಿಶೇಷ ಪೂಜಾ ಇದ್ದ ಕಾರಣ ಭಕ್ತರು ಪ್ರಸಾದ ಸ್ವೀಕರಿಸಿದರು. ಕೆಲವೇ ಕ್ಷಣದಲ್ಲಿ ಕಾಣಿಸಿಕೊಂಡ ವಾಂತಿ ಬೇದಿಯಿಂದ ಪ್ರಸಾದ ಸೇವಿಸಿದ ಭಕ್ತರು ಅಸ್ವಸ್ಥಗೊಂಡರು ನಂತರ ಭಕ್ತರನ್ನು ಕೊಳ್ಳೆಗಾಲದ ಸರ್ಕಾರಿ ಆಸ್ಪತ್ರೆ ಮತ್ತು ಕಾಮಗೆರೆಯ ಹೋಲಿಕ್ರಾಸ್ ಆಸ್ಪತ್ರೆಗೆ ದಾಖಲಿಸಲಾಯಿತು.

ಇನ್ನೂ ಚಿಕಿತ್ಸೆ ಫಲಕಾರಿಯಾಗದೆ ಮೂವರ ಸಾವನಪ್ಪಿದ್ದು,ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ ರಾಮಾಪುರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Next Story

RELATED STORIES