ಮಿನಿ ಟ್ರಕ್ ನದಿಗೆ ಉರುಳಿ ಬಿದ್ದು18 ಮಂದಿಯ ದುರ್ಮರಣ

X
TV5 Kannada15 Dec 2018 5:34 AM GMT
ಮಿನಿ ಟ್ರಕ್ವೊಂದು ನದಿಗೆ ಉರುಳಿದು 18 ಮಂದಿ ಪ್ರಯಾಣಿಕರು ಸಾವನ್ನಪ್ಪಿದ ಘಟನೆ ನೇಪಾಳದಲ್ಲಿ ನಡೆದಿದೆ.
ನೇಪಾಳದ ಶಿಖಾರ್ ಬೇಸಿಯಿಂದ ಘ್ಯಾಂಗ್ ಫೆದಿ ಮಾರ್ಗದಲ್ಲಿ ಪ್ರಯಾಣಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಈ ದುರಂತ ಸಂಭವಿಸಿದ್ದು, ಸುಮಾರು 18 ಮಂದಿ ಸಾವನ್ನಪ್ಪಿದ್ದು, 16ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯವಾಗಿದೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
Next Story