Top

ರಮೇಶ್ ಜಾರಕಿಹೊಳಿ ಬಗ್ಗೆ ಸತೀಶ್ ಜಾರಕಿಹೊಳಿ ಹೇಳಿದ್ದೇನು ಗೊತ್ತಾ..?

ರಮೇಶ್ ಜಾರಕಿಹೊಳಿ ಬಗ್ಗೆ ಸತೀಶ್ ಜಾರಕಿಹೊಳಿ ಹೇಳಿದ್ದೇನು ಗೊತ್ತಾ..?
X

ಶಾಸಕ ರಮೇಶ್ ಜಾರಕಿಹೊಳಿ ಇನ್ನು ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ. ಸಂಪರ್ಕಕ್ಕೆ ಸಿಗದೇ ಏನೂ ಹೇಳುವುದಕ್ಕೆ ಹಾಗಲ್ಲ ಎಂದು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಂಗಳವಾರ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಜೊತೆ ಇನ್ನು ಏನೂ ಮಾತನಾಡಿಲ್ಲ. ಮಾತನಾಡಿದ ಮೇಲೆ ಮಾಧ್ಯಮಗಳಿಗೆ ಹೇಳುತ್ತೇವೆ. ಸಂಕ್ರಾಂತಿ ಬಳಿಕ ಬಿಜೆಪಿ ಅಧಿಕಾರಕ್ಕೆ ಬರುತ್ತೆ ಅನ್ನೋ ವಿಚಾರ ಸುಳ್ಳು ಎಂದು ಹೇಳಿದರು.

ರಮೇಶ ಜಾರಕಿಹೊಳಿ ದೆಹಲಿಯಲ್ಲಿರುವ ಅಂದಾಜು ಇದೆ.ನಾಳೆ ಗೋಕಾಕ ಗೆ ಹೋಗ್ತೀನಿ ರಮೇಶ್ ಸಿಕ್ಕರೆ ಭೇಟಿಯಾಗಿ ಮಾತಾಡ್ತೀನಿ. ಇವಾಗೇನು ಅರ್ಜಂಟ ಇಲ್ಲ, ರಮೇಶ ಅವರು ಬಂದ್ ಮೇಲೆ ಮಾತ್ತಾಡ್ತೀವಿ.ನಾನು ಸೇರಿದಂತೆ ಕಾಂಗ್ರೆಸ್ ನ ಹಿರಿಯ ನಾಯಕರು ರಮೇಶ ಅವರನ್ನು ಸಂಪರ್ಕಿಸುವ ಪ್ರಯತ್ನ ಮಾಡುತ್ತಿದ್ದೇವೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮತ್ತು ಬಿಜೆಪಿ ಪಕ್ಷದವರು ಸಮ್ಮಿಶ್ರ ಸರ್ಕಾರ ಪತನವಾಗುತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತಾದೆ ಎಂದು ಹೇಳುತ್ತಲೇ ಬಂದಿದ್ದಾರೆ. ಆದರೆ ಸರಕಾರಕ್ಕೆ ಎನೂ ಆಗಲ್ಲ ಅಂತಾ ನಾವು ಹೇಳುತ್ತಾ ಬಂದಿದ್ದೇವೆ. ಸರಕಾರ ಸುಭದ್ರವಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಅತೃಪ್ತ ಶಾಸಕರು ಬಿಜೆಪಿಯ ಗ್ರಿನ್ ಸಿಗ್ನಲ್ ಗಾಗಿ ಕಾಯುತ್ತಿದ್ದಾರೆ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು ಅದರ ಬಗ್ಗೆ ನನಗೇನೂ ಗೊತ್ತಿಲ್ಲ, ರಮೇಶ್ ಬಂದ ಮೇಲೆ ಎಲ್ಲವೂ ಗೊತ್ತಾಗಲಿದೆ ಎಂದು ಸತೀಶ ಜಾರಕಿಹೊಳಿ ತಿಳಿಸಿದರು.

Next Story

RELATED STORIES