ಕುಮಾರಸ್ವಾಮಿ ಆದೇಶಕ್ಕೆ ತಡೆ ತಂದಿರುವ ಹೆಚ್ ಡಿ ರೇವಣ್ಣ..?

X
TV5 Kannada1 Jan 2019 9:32 AM GMT
ಸಮ್ಮಿಶ್ರ ಸರ್ಕಾರದಲ್ಲಿ ಲೋಕೋಪಯೋಗಿ ಸಚಿವ ಹೆಚ್.ಡಿ ರೇವಣ್ಣ ಮತ್ತೆ ಸೂಪರ್ ಸಿಎಂ ಎಂಬುದನ್ನು ಸಾಬೀತುಪಡಿಸಿದ್ದಾರೆ.
ಬೆಂಗಳೂರು ಹೊರವಲಯ ನೆಲಮಂಗಲದ ಯಂಟಗಾನಹಳ್ಳಿ ಗ್ರಾಮ ಪಂಚಾಯತಿಯ ಪಿಡಿಓ ವಿರುದ್ದ ಕರ್ತವ್ಯಲೋಪ ಹಾಗೂ ಸರ್ವಾಧಿಕಾರಿ ದೋರಣೆ ಆರೋಪ ಹಿನ್ನೆಲೆ ಮುಖ್ಯಮಂತ್ರಿ ಕುಮಾರಸ್ವಾಮಿ ವರ್ಗಾವಣೆ ಮಾಡಿ ಆದೇಶ ಮಾಡಿದ್ದರು. ಆದರೆ ಪಿಡಿಓ ಮೋಹನ್ ಕುಮಾರ್ ಗೆ ಸಚಿವ ರೇವಣ್ಣರ ಶ್ರೀ ರಕ್ಷೆಯಿಂದ ಮೋಹನ್ ಕುಮಾರ್ ವರ್ಗಾವಣೆ ಆದೇಶಕ್ಕೆ ತಡೆಹಿಡಿಯಲಾಗಿದೆ.
ಸಚಿವ ರೇವಣ್ಣರ ಆಶೀರ್ವಾದದಿಂದಲೇ ಪಿಡಿಓ ಅಧಿಕಾರಿ ಮೋಹನ್ ಕುಮಾರ್ ಆದೇಶಕ್ಕೆ ತಡೆ ಬಿದ್ದಿದೆ ಎಂದು ಗ್ರಾಮಸ್ಥರು ಹಾಗೂ ಇದೇ ಪಂಚಾಯತಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಮಂಗಳವಾರ ಯಂಟಗಾನಹಳ್ಳಿ ಗ್ರಾಮ ಪಂಚಾಯತಿಯ ಕಾರ್ಯಾಲಯಕ್ಕೆ ಬೀಗ ಜಡಿದು ಪ್ರತಿಭಟನೆಯನ್ನು ಮಾಡಿದರು.
Next Story