ಜನವರಿ 9ಕ್ಕೆ ತುಮಕೂರಿಗೆ ಪ್ರಧಾನಿ ನರೇಂದ್ರ ಮೋದಿ..!?

ಲೋಕಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ಸಿದ್ಧತೆ ನಡೆಸಿದ್ದು, ಹೊಸವರ್ಷದಿಂದಲೇ ಕರ್ನಾಟಕದಲ್ಲಿ ಪ್ರಚಾರಕ್ಕೆ ತಯಾರಿ ನಡೆಸಿದೆ. ಮುಂದಿನ ವಾರ ದಿನಾಂಕ 9ರಂದು ಪ್ರಧಾನಿ ಮೋದಿ ಮತ್ತು ಅಮಿತ್ ಷಾ ತುಮಕೂರಿಗೆ ಆಗಮಿಸಲಿದ್ದು, ಉಭಯ ನಾಯಕರ ಆಗಮನಕ್ಕೆ ಬಿಜೆಪಿ ಭರ್ಜರಿ ತಯಾರಿ ನಡೆಸಿದೆ.

ಒಂದೇ ದಿನದಲ್ಲಿ 5 ಲೋಕಸಭೆ ಕ್ಷೇತ್ರಗಳ ಪ್ರಮುಖರ ಜೊತೆ ಮೋದಿ, ಶಾ ವಿಶೇಷ ಸಭೆ ನಡೆಸಲಿದ್ದು, ಕೋಲಾರ, ತುಮಕೂರು, ಚಿತ್ರದುರ್ಗ,ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಕ್ಷೇತ್ರಗಳ ಬೂತ್ ಪ್ರಮುಖರು, ಶಕ್ತಿ ಕೇಂದ್ರದ ಪ್ರಮುಖರು ಈ ವಿಶೇಷ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ತುಮಕೂರಿನ ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ಸಭೆ ನಡೆಯಲಿದ್ದು, ಸಭೆಗೂ ಮುನ್ನ ಕಮಲ ನಾಯಕರು ಸಿದ್ದಗಂಗಾ ಶ್ರೀಗಳನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಲಿದ್ದಾರೆ.