ಸಿಎಂ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಯುವಕ..!

ವಿಜಯಪುರ: ಸರಕಾರಿ ಶಾಲೆಗಾಗಿ ಯುವಕನೊಬ್ಬ ಸಿಎಂ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಘಟನೆ ವಿಜಯಪುರದಲ್ಲಿ ನಡೆದಿದೆ.

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದಲ್ಲಿ ಸರಕಾರಿ ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜು ಹಾಗೂ ಪದವಿ ಕಾಲೇಜುಗಳನ್ನು ಆರಂಭಿಸುವಂತೆ, ಸಂಜೀವಕುಮಾರ್ ಜೋಶಿ ಎಂಬುವರು, ಸಿಎಂ, ಶಾಸಕರು, ಜಿಲ್ಲಾಧಿಕಾರಿ, ಪದವಿಪೂರ್ವ ನಿರ್ದೇಶಕರು ಮತ್ತು ಉಪನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.

ಈ ಹಿಂದೆ ಜೋಶಿ, ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದಿದ್ದು, ಪ್ರಧಾನಿ ಕಾರ್ಯಾಲಯದಿಂದ ಯಾವುದೇ ಉತ್ತರ ಬರದ ಹಿನ್ನೆಲೆ ಇಂದು ಮತ್ತೆ ಪತ್ರ ಬರೆದು ಸಿಎಂಗೆ ಮನವಿ ಮಾಡಿದ್ದಾರೆ.