ಗ್ರಾಮದ ಕುಡಿಯುವ ನೀರಿನ ಟ್ಯಾಂಕಿಗೆ ವಿಷ ? ಮಹಿಳೆ ಸಾವು, ಹಲವರು ಅಸ್ವಸ್ಥ

ಕುಡಿಯುವ ನೀರಿನ ಟ್ಯಾಂಕಿಗೆ ಕೀಟನಾಶಕ ಬೆರೆಸಿರುವ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ಮುದನೂರ ಕೆ ಗ್ರಾಮದಲ್ಲಿ ನಡೆದಿದೆ.

ಪ್ರತಿ ವರ್ಷ ಟ್ಯಾಂಕ್ ಹತ್ತಿರ ಪೈಪ್ ಹಾಗೂ ವೈರ್ ಕತ್ತರಿಸುತ್ತಿದ್ದ ಕಿಡಿಗೇಡಿಗಳು ಈ ಬಾರಿ ನೀರಿಗೆ ವಿಷ ಬೆರೆಸಿರುವ ಅನುಮಾನವನ್ನು ಗ್ರಾಮಸ್ಥರು ವ್ಯಕ್ತಪಡಿಸಿದ್ದರು, ಆದರೆ ಇಂದು ಬೆಳಗ್ಗೆ ಅ ನೀರನ್ನು ಕುಡಿದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

 ಬಾವಿಗೆ ವಿಷ ಹಾಕಿದ ಕಿಡಿಗೇಡಿಗಳು

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಖಾಪುರದಲ್ಲಿ ಕುಡಿಯುವ ನೀರಿಗೆ ಕಿಡಿಗೇಡಿಗಳು ವಿಷ ಬೆರೆಸಿದ್ದಾರೆ. ಮೂದನೂರ ಎಂಬ ಗ್ರಾಮದಿಂದ ಕುಡಿಯುವ ನೀರನ್ನು ಶಾಖಾಪೂರ, ತೆಗ್ಗೆಳ್ಳಿ ಗ್ರಾಮಕ್ಕೆ ಸರಬರಾಜು ಮಾಡಲಾಗುತ್ತಿತ್ತು. ಇಲ್ಲಿಂದ ಬೇರೆ ಕಡೆ ಕುಡಿಯುವ ನೀರು ಸರಬರಾಜು ಆಗುತ್ತಿರುವುದನ್ನು ಸಹಿಸದ ಕಿಡಿಗೇಡಿಗಳು, ಬಾವಿಗೆ ವಿಷ ಹಾಕಿದ್ದಾರೆ.

ಇಲ್ಲಿಯವರೆಗೂ ವಿಷ ಹಾಕಿದ ಪಾಪಿಗಳು ಯಾರೆಂದು? ಖಾತ್ರಿಯಾಗಿಲ್ಲ ಎಂದು ಹೇಳಲಾಗಿದೆ.  ಈ ನೀರನ್ನು ಕುಡಿಯದೇ ಕೆಲವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.

ದುಷ್ಕರ್ಮಿಗಳ ಈ ಕೃತ್ಯಕ್ಕೆ ಗ್ರಾಮಸ್ಥರಲ್ಲಿ ಆತಂಕ 

ದುಷ್ಕರ್ಮಿಗಳ ಈ ಕೃತ್ಯಕ್ಕೆ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಸದ್ಯ ಮುದನೂರ ಕೆ ನೀರಿನ ಟ್ಯಾಂಕ್ ಸ್ಥಳಕ್ಕೆ ಸುರಪುರ ತಾಲೂಕು ಅಧಿಕಾರಿ ಸುರೇಶ ಅಂಕಲಗಿ, ತಾಲೂಕು ಪಂಚಾಯಿತಿ ಇಓ ಜಗದೇವಪ್ಪ, ಪಿಡಿಓ ಸಿದ್ರಾಮಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗ್ರಾಮಸ್ಥರಿಗೆ ಈ ಬಗ್ಗೆ ಮಾಹಿತಿ ನೀಡಿ ಭಯ ಪಡದಂತೆ ತಿಳಿಸಿದ್ದಾರೆ.

ಯಾದಗಿರಿ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಕೀಟನಾಶಕ ಬೆರೆಸಿದ್ದರಿಂದ ಹಲವರು ಅಸ್ವಸ್ಥರಾಗಿ ಮಹಿಳೆಯೊಬ್ಬರು ಮೃತರಾದ ಘಟನೆಗೆ ಸಂಬಂಧಿಸಿದಂತೆ ಯಾದಗಿರಿ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಂದ ವಿವರ ಪಡೆದಿದ್ದು ಕೂಡಲೇ ಸ್ಥಳ ಪರಿಶೀಲಿಸಿ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಸೂಚಿಸಿದ್ದಾರೆ.

ಗ್ರಾಮದ ಎಲ್ಲಾ ಮನೆಗಳಲ್ಲಿ ಸಂಗ್ರಹಿಸಿದ್ದ ನೀರನ್ನು ಖಾಲಿ ಮಾಡಿಸುವ ಕಾರ್ಯದಲ್ಲಿ ಅಧಿಕಾರಿಗಳು ತೊಡಗಿದ್ದಾರೆ. ಘಟನೆ ಬಗ್ಗೆ ಕೆಂಬಾವಿ ಪೊಲೀಸ್ ಠಾಣೆಯಲ್ಲಿ ಘಟನೆ ಬಗ್ಗೆ ದೂರು ದಾಖಲಾಗಿದೆ.