ಆಪರೇಷನ್ ಕಮಲಕ್ಕೆ ಕುಮ್ಮಕ್ಕು ಕೊಟ್ಟಿದ್ದು ಯಾರು ಗೊತ್ತಾ? ಖಂಡ್ರೆ  ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಕೆಳಮಟ್ಟದ ಹೇಳಿಕೆ ನೀಡಿದ್ದಾರೆ, ಇದು ಲೋಕಸಭೆ ಚುನಾವಣೆಗೆ ಅವರ ಭಯ ತೋರಿಸುತ್ತೆ ಆಪರೇಷನ್ ಕಮಲಕ್ಕೆ ಕುಮ್ಮಕ್ಕು ಕೊಟ್ಟಿದ್ದು ಮತ್ತು ತಮ್ಮ ಹೇಳಿಕೆ ಮೂಲಕ ಪ್ರಧಾನಿ ಹುದ್ದೆಯ ಗೌರವ ಕಳೆದಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ  ಆಕ್ರೋಶ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ  ಹತಾಷೆಯಿಂದ ಇಂಥ ಹೇಳಿಕೆ ನೀಡಿದ್ದಾರೆ

ಬೆಂಗಳೂರಿನಲ್ಲಿ ಶನಿವಾರ ಮಾತನಾಡಿದ ಅವರು , ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಕ್ಲಕ್ ಎಂಬ ಪ್ರಧಾನಿ ಮೋದಿ ಹೇಳಿಕೆ‌ ವಿಚಾರವಾಗಿ ವಾಗ್ಥಾಳಿಯನ್ನು ನಡೆಸಿದರು. ಪ್ರಧಾನಿ ನರೇಂದ್ರ ಮೋದಿ  ಹತಾಷೆಯಿಂದ ಇಂಥ ಹೇಳಿಕೆ ನೀಡಿದ್ದಾರೆ. ದೇಶದ ಜನತೆಗೆ ನೀಡಿದ್ದ ಯಾವುದೇ ಭರವಸೆ ಈಡೇರಿಸಿಲ್ಲ, ರಾಜಕೀಯ ಗಿಮಿಕ್ ಮೂಲಕ ಜನರನ್ನು ಮೂಢರನ್ನಾಗಿಸಿದ್ದಾರೆ ಎಂದು ಖಂಡ್ರೆ ತಿಳಿಸಿದರು.

ಜನ ತಕ್ಕ ಪಾಠ ಕಲಿಸ್ತಾರೆ

ಲೋಕಸಭೆ ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸ್ತಾರೆ, ಮೋದಿಯನ್ನು ಸೋಲಿಸುತ್ತಾರೆ ಬಿಜೆಪಿಯವರು ಎಷ್ಟೇ ಪ್ರಯತ್ನ ಪಟ್ಟರು ಈ ಭಾರೀ ಸೋಲುವುದು ಖಚಿತ ಎಂದು ಈಶ್ವರ್ ಖಂಡ್ರೆ ಹೇಳಿದರು.