ಶಾಸಕ‌ ಸ್ಥಾನಕ್ಕೆ ಉಮೇಶ್ ಜಾಧವ್ ರಾಜೀನಾಮೆ ?

ಚಿಂಚೋಳಿ ಕಾಂಗ್ರೆಸ್ ಶಾಸಕ  ಉಮೇಶ್ ಜಾಧವ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಚಿಂತನೆ ನಡೆಸುತ್ತಿದ್ದಾರೆ ಎನ್ನುವ ಅನುಮಾನಗಳು ವ್ಯಕ್ತವಾಗಿದೆ.

ನಿಜವಾಗಿಯೂ ಸರ್ಕಾರದ ನಡವಳಿಕೆಗೆ ಬೇಸರಗೊಂಡಿದ್ದರಾ, ಇಲ್ಲಾ ಬಿಜೆಪಿ ಆಪರೇಷನ್ ಕಮಲಕ್ಕೆ ಒಳಗಾಗಿದ್ದಾರಾ ? ಅಥವಾ ರಾಜೀನಾಮೆ ನೀಡುತ್ತಾರೆ ಎನ್ನುವಂತಹ ಸುದ್ದಿಗಳು ಸತ್ಯಕ್ಕೆ ದೂರವಾಗಿದ್ಯಾ ಎನ್ನುವುದನ್ನು ಸಂಕ್ರಾಂತಿಯ ನಂತರ ತಿಳಿಯಬೇಕು.

ಲೋಕಸಭಾ ಚುನಾವಣೆ ತಯಾರಿ ಭರದಿಂದ ಸಾಗಿದ್ದು, ಈಗ ಕಲಬುರಗಿ ಕ್ಷೇತ್ರದಲ್ಲಿ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಬಿಜೆಪಿ ಪ್ಲ್ಯಾನ್ ರೂಪಿಸಿದೆ.

ಸಚಿವ ಸಂಪುಟ ವಿಸ್ತರಣೆ ಬಳಿಕ ಉಮೇಶ್ ಜಾಧವ್​ ಅಸಮಾಧಾನಗೊಂಡಿದ್ದಾರೆ. ಇದನ್ನೇ ಅಸ್ತ್ರವಾಗಿಸಿಕೊಳ್ಳಲು ಯತ್ನಿಸುತ್ತಿರುವ ಬಿಜೆಪಿ ಅವರನ್ನು ಲೋಕಸಭಾ ಚುನಾವಣೆಯಲ್ಲಿ ಕಲಬುರಗಿಯಲ್ಲಿ ಖರ್ಗೆ ವಿರುದ್ಧ ತಮ್ಮ ಪಕ್ಷದ ಅಭ್ಯರ್ಥಿಯನ್ನಾಗಿಸುವ ಪ್ಲ್ಯಾನ್​ ಮಾಡಿದ್ದು ಸ್ಥಳೀಯ ಮಟ್ಟದಲ್ಲಿ ಮಾತುಕತೆಯಾಗಿದೆ ಎನ್ನಲಾಗುತ್ತಿದೆ, ಹೈಕಮಾಂಡ್​ನಲ್ಲೂ ಚರ್ಚೆಯಾಗಿದೆ ಎನ್ನಲಾಗುತ್ತೀದೆ.

ಇನ್ನೂ ಅವರು ನಿಜವಾಗಿಯೂ ರಾಜೀನಾಮೆ ನೀಡುತ್ತಾರೋ ಅಥವಾ ಪಕ್ಷದಲ್ಲೇ ಇರುತ್ತಾರ ಖಾದು ನೋಡಬೇಕಷ್ಟೇ.