ಬಿಜೆಪಿಯವರು ಹಡಬಿಟ್ಟಿ ದುಡ್ಡು ಮಾಡಿಕೊಂಡಿದ್ದಾರೆ: ಸಿದ್ದರಾಮಯ್ಯ

ಬಿಜೆಪಿಯವರು ಹಡಬಿಟ್ಟಿ ದುಡ್ಡು ಮಾಡಿಕೊಂಡಿದ್ದಾರೆ ಹೀಗಾಗಿ ಆಪರೇಶನ್ ಕಮಲ ಮಾಡಲು ಹೊರಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಆಪರೇಷನ್ ಕಮಲವೂ ಇಲ್ಲ ಏನೂ ಇಲ್ಲ

ಬೆಂಗಳೂರಿನಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಮಾಧ್ಯಮಗಳೊಂದಿಗೆ ಗಣರಾಜ್ಯೋತ್ಸವ ಆಚರಿಸಿದ ಬಳಿಕ ಮಾತನಾಡಿದ ಅವರು, ಆಪರೇಷನ್ ಕಮಲವೂ ಇಲ್ಲ ಏನೂ ಇಲ್ಲ, ಅವರ ಎಲ್ಲಾ ಪ್ರಯತ್ನ ವಿಫಲವಾಗಿದೆ ಎಂದು ತಿಳಿಸಿದರು.

ಬಿಜೆಪಿಯವರು ಹಡಬಿಟ್ಟಿ ದುಡ್ಡು ಮಾಡಿಕೊಂಡಿದ್ದಾರೆ

ಬಿಜೆಪಿಯವರು ಹಡಬಿಟ್ಟಿ ದುಡ್ಡು ಮಾಡಿಕೊಂಡಿದ್ದಾರೆ ಅದನ್ನು ಇಟ್ಟು ಕೊಂಡು ನಮ್ಮ ಶಾಸಕರನ್ನು ಬನ್ನಿ ಬನ್ನಿ ಅಂತ ಕರೆಯುತ್ತಿದ್ದಾರೆ ಕುಮಾರಸ್ವಾಮಿ ಹೇಳಿದ್ದು ನಿಜ ಈಗಲೂ ನಮ್ಮ ಶಾಸಕರಿಗೆ ಕರೆ ಮಾಡುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ ಮಾಡಿದರು.