ಮಗನಿಗಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ ಅನಿತಾ ಕುಮಾರಸ್ವಾಮಿ

ಬೆಂಗಳೂರು: ನಿಖಿಲ್ ಕುಮಾರ್ ಸೀತಾರಾಮ ಕಲ್ಯಾಣ ಸಿನಿಮಾ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ ಹಿನ್ನೆಲೆಯಲ್ಲಿ ಶಾಸಕಿ ಅನಿತಾ ಕುಮಾರಸ್ವಾಮಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಶಾಸಕಿ ಅನಿತಾ ಕುಮಾರಸ್ವಾಮಿಯಿಂದ ದೂರು ನೀಡಲು  ಮುಂದಾಗಿದ್ದಾರೆ. ಸೀತಾರಾಮಕಲ್ಯಾಣ ಸಿನಿಮಾ ಯೂಟ್ಯೂಬ್, ಫೇಸ್ ಬುಕ್ ನಲ್ಲಿ ಯಾರೋ ಕಿಡಿಗೇಡಿಗಳು ಅಪ್ ಲೋಡ್ ಮಾಡಿರುವುದರಿಂದ  ಆರೋಪಿಗಳ ವಿರುದ್ದ  ಕ್ರಮಕೈಗೊಳ್ಳುವಂತೆ ದೂರು ದಾಖಲಿಸಿದ್ದಾರೆ.

ಇನ್ನು, ಫೆಬ್ರವರಿ 5ರಂದು ದೂರು ನೀಡಿರುವ  ಅನಿತಾ ಕುಮಾರಸ್ವಾಮಿ. ಪೊಲೀಸ್ ಅಧಿಕಾರಿಗಳು ಎಪ್ ಐ ಆರ್ ದಾಖಲು ಮಾಡಿಕೊಂಡು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.