ಹಾಸನದ ಸ್ಥಳೀಯರಿಗೆ ಸಿಎಂ ಕುಮಾರಸ್ವಾಮಿ ಕಿವಿಮಾತು..!

ಬೆಂಗಳೂರು: ಹಾಸನ ಸ್ಥಳೀಯ ಶಾಸಕರ ವಿರುದ್ಧ ಯಾವುದೇ ಪ್ರತಿಭಟನೆ ಮಾಡಬಾರದು ಹಾಸನ ಜಿಲ್ಲಾಧಿಕಾರಿ ಮತ್ತು ಎಸ್ ಪಿ ಜೊತೆ ಮಾತನಾಡಿ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವಿಟರ್ ಮೂಲಕ ತಿಳಿಸಿದ್ದಾರೆ.

ಪರಿಸ್ಥಿತಿಗೆ ಅನುಗುಣವಾಗಿ ರಾಜಕೀಯ ವಿದ್ಯಮಾನಗಳನ್ನು  ನಿರ್ವಹಿಸುವ ಶಕ್ತಿ ನನಗಿದೆ. ಯಾರೂ ಪ್ರಚೋದನೆಗೆ ಒಳಗಾಗಬಾರದು, ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗುಬಾರದು ಎಂದು ಸಿಎಂ ಮನವಿ ಮಾಡಿಕೊಂಡಿದ್ದಾರೆ.

https://platform.twitter.com/widgets.js

ಆಪರೇಷನ್ ಕಮಲದಲ್ಲಿ ಹಾನಸ ಬಿಜೆಪಿ ಶಾಸಕ ಪ್ರೀತಂ ಗೌಡ ಸಹ ಪಾಲುದಾರಾಗಿದ್ದರು. ಈ ಸಂದರ್ಭದಲ್ಲಿ ಫೋನ್ ನಲ್ಲಿ ದೇವೇಗೌಡರ ವಿರುದ್ಧ ಬಹಳ ಹಗುರವಾಗಿ ಮಾತನಾಡಿದ ಹಿನ್ನೆಲೆ ಸ್ಥಳೀಯ ಜೆಡಿಎಸ್ ಕಾರ್ಯಕರ್ತರು ಶಾಸಕನ ಮನೆ ಮುಂದೆ ಪ್ರತಿಭಟನೆಗೆ ಮುಂದಾಗಿದ್ದರು.