ಸಹೋದರನ(ನರೇಂದ್ರ ಮೋದಿ) ಆಡಳಿತ ವೈಖರಿ ಬಗ್ಗೆ ಪ್ರಹ್ಲಾದ್ ಮೋದಿ ಹೇಳಿದ್ದೇನು..?

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಸಹೋದರ ಪ್ರಹ್ಲಾದ್ ಮೋದಿ ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ್ದು, ಶ್ರೀಕೃಷ್ಣನಿಗೆ ವಿಶೇಷ ಪೂಜೆ ಸಲ್ಲಿಸಿದರು.

ಅಲ್ಲದೇ ಮಠದ ಗೋಶಾಲೆಗೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಹ್ಲಾದ್ ಮೋದಿ, ಇದೇ ಮೊದಲ ಬಾರಿಗೆ ಮಠಕ್ಕೆ ಭೇಟಿ ಕೊಡುತ್ತಿದ್ದೇನೆ. ಇದೊಂದು ಧಾರ್ಮಿಕ ಉದ್ದೇಶದ ಭೇಟಿಯಾಗಿದೆ ಎಂದಿದ್ದಾರೆ.

ಅಲ್ಲದೇ, ಎನ್‌ಡಿಎ ಸರ್ಕಾರದ ಬಗ್ಗೆ ಮಾತನಾಡಿದ ಪ್ರಹ್ಲಾದ್ ಮೋದಿ, ಜನರು ಎನ್‌ಡಿಎ ಸರ್ಕಾರದ ಬಗ್ಗೆ ತೃಪ್ತರಾಗಿದ್ದಾರೆ. ಕಳೆದ ಐದು ವರ್ಷಗಳಿಂದ ಎನ್‌ಡಿಎ ಸರ್ಕಾರ ಉತ್ತಮ ಕೆಲಸ ಮಾಡಿದೆ. ಭಾರತವನ್ನು ವಿಶ್ವವೇ ಗುರುತಿಸುವಂತೆ ಮಾಡಿದ್ದು ಎನ್‌ಡಿಎ ಸರ್ಕಾರ. ಸ್ವಾತಂತ್ರ್ಯಾನಂತರ ಇದು ಸಾಧ್ಯವಾಗಿರಲಿಲ್ಲ ಎಂದು ಜನತೆಯೇ ಹೇಳುತ್ತಿದೆ.

ಇನ್ನು ತಮ್ಮ ಮೇಲಿದ್ದ ಕೆಲ ಆರೋಪದ ಬಗ್ಗೆ ಮಾತನಾಡಿದ ಪ್ರಹ್ಲಾದ್ ಮೋದಿ, ನಾನು ಮಮತಾ ಬ್ಯಾನರ್ಜಿಯನ್ನು ಬೆಂಬಲಿಸಿದ್ದೆ ಅನ್ನೋದು ಸುಳ್ಳು. ಸಹೋದರ ಪ್ರಧಾನಿ ನರೇಂದ್ರ ಮೋದಿಯನ್ನು ಬಿಟ್ಟು ನಾನ್ಯಾಕೆ ಮಮತಾ ಬ್ಯಾನರ್ಜಿಯನ್ನು ಬೆಂಬಲಿಸಲಿ? ದೇಶದಲ್ಲಿ ಬಹಳಷ್ಟು ಪ್ರಿಯಾಂಕಾಗಳಿದ್ದಾರೆ ಹೀಗಿರುವಾಗ ,ಒಬ್ಬ ಪ್ರಿಯಾಂಕಾ ಬಂದರೆ ಏನಾಗುತ್ತೆ ಎಂದು ಪ್ರಿಯಾಂಕಾ ಗಾಂಧಿ ರಾಜಕೀಯ ಪ್ರವೇಶದ ಬಗ್ಗೆ ಲೇವಡಿ ಮಾಡಿದ್ದಾರೆ.