ಪ್ರೀತಂ ಗೌಡ ಮನೆ ಮೇಲೆ ಕಲ್ಲು ತೂರಾಟ ಗಾಯಾಳು ಬೆಂಗಳೂರಿಗೆ ಶಿಫ್ಟ್

ಮಾಜಿ ಪ್ರಧಾನಿ ದೇವೇಗೌಡ, ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಜೆಡಿಎಸ್​ ಪಕ್ಷದ ಬಗ್ಗೆ ಹಗುರವಾಗಿ ಮಾತನಾಡಿದ ಹೇಳಿಕೆ ನೀಡಿದ ಹಾಸನ ನಗರ ಬಿಜೆಪಿ ಶಾಸಕ ಪ್ರೀತಂಗೌಡ ನಿವಾಸ ಮುಂದೆ ಸಾವಿರಾರು ಸಂಖ್ಯೆಯಲ್ಲಿ ಜೆಡಿಎಸ್​ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕಲ್ಲು ತೂರಾಟ ನಡೆಸಿದ್ದಾರು ಪ್ರತಿಭಟನೆ ವೇಳೆ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ನಿನ್ನೆ ಯಡಿಯೂರಪ್ಪ ಆರೋಗ್ಯ ವಿಚಾರಿಸಿ ಬೆಂಗಳೂರಿಗೆ ಬರುವಂತೆ ಸೂಚನೆ ನೀಡಿದ್ದರು, ಇದೀಗ ತಲೆಗೆ ಕಲ್ಲೇಟು ಬಿದ್ದು ಜಿಲ್ಲಾಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಬಿಜೆಪಿ ಕಾರ್ಯಕರ್ತ ರಾಹುಲ್ ಕಿಣಿಯನ್ನು ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ.

ಮಾಜಿ ಪ್ರಧಾನಿ ದೇವೇಗೌಡರು ಇನ್ನೇನು ಸಾಯುತ್ತಾರೆ ಸಿಎಂ ಕುಮಾರಸ್ವಾಮಿಯವರ ಆರೋಗ್ಯ ಸರಿಯಿಲ್ಲ, ಜೆಡಿಎಸ್​​ ಕಲಾಸ್​​ ಎಂದು ಬಿಜೆಪಿ ಶಾಸಕ ಪ್ರೀತಮ್​​ ಗೌಡ ನಾಲಿಗೆ ಹರಿಬಿಟ್ಟಿದ್ದರು. ಈ ಹೇಳಿಕೆ ಖಂಡಿಸಿ ಪ್ರೀತಂ ಗೌಡ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಆಕ್ರೋಶಗೊಂಡಿದ್ದರು.

ಇಂದು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಿರುವ ಬಿಜೆಪಿ ಕಾರ್ಯಕರ್ತ ರು, ಇಂದು ನಗರದ ಹೇಮಾವತಿ ಪ್ರತಿಮೆ ಬಳಿ ಸಾವಿರಾರು ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ ಮಾಡಲು ನಿರ್ದಾರ ಮಾಡಿದ್ದು, ಬಿಜೆಪಿ ಜಿಲ್ಲಾಧ್ಯಕ್ಷ ಯೋಗರಮೇಶ್ ನೇತ್ರುತ್ವದಲ್ಲಿ ಪ್ರತಿಭಟಿಸಲು ನಿರ್ದಾರ ಮಾಡಲಾಗಿದೆ.ನಿನ್ನೆ ಬಿಜೆಪಿ ಶಾಸಕ ಪ್ರೀತಂ ಗೌಡ ಮನೆ ಮೇಲೆ ಚಪ್ಪಲಿ ಹಾಗೂ ಕಲ್ಲು ಎಸೆಯಲಾಗಿತ್ತು.