ಲೋಕಸಭಾ ಮಹಾಸಮರಕ್ಕೆ ದಿನಾಂಕ ಪ್ರಕಟ : ಕರ್ನಾಟಕದಲ್ಲಿ 2 ಹಂತದ ಚುನಾವಣೆ

ನವದೆಹಲಿ: ಲೋಕಸಭಾ ಚುನಾವಣೆಗೆ ದಿನಾಂಕವನ್ನು ಪ್ರಕಟಿಸಿದ್ದು ದೇಶದಲ್ಲಿ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣೆ ಆಯೋಗವು ತಿಳಿಸಿದೆ.

ನವದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮುಖ್ಯಚುನಾವಣೆ ಆಯ್ತು ಸುನೀಲ್ ಆರೋರಾ, ದೇಶದ್ಯಾಂತ ಒಟ್ಟು 7 ಹಂತಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಏಪ್ರಿಲ್ 11ಕ್ಕೆ ಮೊದಲ ಹಂತದ ಹಾಗೂ ಮೇ 19ಕ್ಕೆ ಕೊನೆಯ ಹಂತದ ಚುನಾವಣೆ ಆಗಲಿದೆ ಎಂದು ತಿಳಿಸಿದರು.

ಕರ್ನಾಟಕದಲ್ಲಿ ಒಟ್ಟು ಎರಡು ಹಂತದಲ್ಲಿ ಮತದಾನ ನಡೆಯಲಿದ್ದು ಏಪ್ರಿಲ್ 18 ಮೊದಲ ಹಂತ ಹಾಗೂ 23ಕ್ಕೆ ಎರಡನೇ ಹಂತದ ಚುನಾವಣೆ ನಡೆಯಲಿದೆ. ಒಟ್ಟು 28 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ಕೇಂದ್ರ ಚುನಾವಣೆ ಆಯೋಗ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಎರಡನೇ ಹಂತದ ಚುನಾವಣೆಯಲ್ಲಿ ಕರ್ನಾಟಕ, ರಾಜ್ಯಸ್ಥಾನ, ಮಣಿಪುರ, ತ್ರಿಪುರ ರಾಜ್ಯಗಳು ಸೇರಿದ್ದು ಈ ಹಂತದ ಚುನಾವಣೆಯಲ್ಲಿ ಒಟ್ಟು 97 ಕ್ಷೇತ್ರಗಳ ಅಭ್ಯರ್ಥಿಗಳಿಗೆ ಮತ ಚಲಾಯಿಸಬಹುದಾಗಿದೆ. ಇನ್ನು ಲೋಕಸಭಾ ಚುನಾವಣೆಯ ಫಲಿತಾಂಶವು ಮೇ 23ಕ್ಕೆ ದೇಶದ್ಯಾಂತ ಏಕಕಾಲದಲ್ಲಿ ಪ್ರಕಟಗೊಳ್ಳಲಿದೆ ಎಂದು ಆಯೋಗ ಮಾಹಿತಿ ನೀಡಿದೆ.