ಕೊನೆಗೂ ಕಾಂಗ್ರೆಸ್ ಕೈ ಹಿಡಿದ ಹಾರ್ದಿಕ್ ಪಟೇಲ್

ಪಾಟೀದಾರ್ ಸಮುದಾಯಕ್ಕೆ ಮೀಸಲಾತಿ ಬೇಕೆಂದು ಹೋರಾಟ ನಡೆಸಿದ್ದ ಹಾರ್ದಿಕ್ ಪಟೇಲ್, ಕೊನೆಗೂ ಕಾಂಗ್ರೆಸ್‌ಗೆ ಸೇರಲು ನಿರ್ಧರಿಸಿದ್ದಾರೆ.

ಪಾಟೀದಾರ್ ಆಂದೋಲನದ ರೂವಾರಿಯಾಗಿರುವ ಹಾರ್ದಿಕ್ ಪಟೇಲ್, ನಾಳೆ ಅಧಿಕೃತವಾಗಿ ಕಾಂಗ್ರೆಸ್‌ ಸೇರ್ಪಡೆಯಾಗಲಿದ್ದು, ಈ ಬಾರಿ ಲೋಕಸಭೆ ಚುನಾವಣೆಗೆ ಗುಜರಾತ್‌ನಿಂದ ಸ್ಪರ್ಧಿಸುವ ಸಾಧ್ಯತೆ ಇದೆ.

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಮ್ಮುಖದಲ್ಲಿ, ಹಾರ್ದಿಕ್ ಪಟೇಲ್ ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ. ಪಾಟೀದಾರ್ ಸಮುದಾಯಕ್ಕೆ ಮೀಸಲಾತಿ ನೀಡಿ ಎಂದು ಪ್ರಧಾನಿ ಮೋದಿ ವಿರುದ್ಧ ಹಾರ್ದಿಕ್ ಪ್ರತಿಭಟನೆ ನಡೆಸಿದ್ದರು.