ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಗೆ ಹೃದಯಾಘಾತ

ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಸಂಸದ , ಹುಣಸೂರು ಸಾಸಕ ಅಡಗೂರು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ವಿಶ್ವನಾಥ್ ಅವರಿಗೆ ಲಘು ಹೃದಯಾಘಾತವಾಗಿದೆ.

ಹೈದ್ರಾಬಾದ್ ಓಜೋನ್ ಆಸ್ಪತ್ರೆಗೆ ದಾಖಲು

ರಾಜ್ಯಾಧ್ಯಕ್ಷ ಎಚ್​.ವಿಶ್ವನಾಥ್​ ಅವರಿಗೆ ಲಘು ಹೃದಯಾಘಾತವಾಗಿದೆ. ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ಹೈದರಾಬಾದ್​ನ ಓಜೋನ್​ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನೂ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆದಿದ್ದು, ಈಗ ಚೇತರಿಸಿಕೊಂಡಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಏರ್ ಆ್ಯಂಬುಲೆನ್ಸ್ ಮೂಲಕ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಕರೆತರಲು ಸಿದ್ಧತೆ ನಡೆಸಲಾಗಿದೆ. ಜಯದೇವ ಸಂಸ್ಥೆಯ ಮುಖ್ಯಸ್ಥ ಡಾ. ಮಂಜುನಾಥ್ ಅವರು ಬೆಂಗಳೂರಿನಿಂದ ಹೈದರಾಬಾದ್​ಗೆ ತೆರಳಿ, ಚಿಕಿತ್ಸೆಯ ಮೇಲುಸ್ತುವಾರಿ ನೋಡಿಕೊಂಡಿದ್ದಾರೆ.

Recommended For You

Leave a Reply

Your email address will not be published. Required fields are marked *