ಬಿಜೆಪಿ ಸದಸ್ಯನ ಮನೆಗೆ ಪ್ರಜ್ವಲ್ ರೇವಣ್ಣ ಎಂಟ್ರಿ ಕೊಟ್ಟಿದ್ದು ಯಾಕೆ ಗೊತ್ತಾ..?

ಹಾಸನ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಸ್ಪರ್ಧಿಸುತ್ತಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್‌.ಡಿ ದೇವೇಗೌಡ ಅಧಿಕೃತವಾಗಿ ಘೋಷಣೆ ಮಾಡಿದ ನಂತರ ಪ್ರಜ್ವಲ್ ರೇವಣ್ಣ ಲೋಕಸಭೆಯಲ್ಲಿ ಗೆಲುವು ಸಾಧಿಸಲು ಹೊಸ ಹೊಸ ತಂತ್ರಗಳನ್ನು ರೂಪಿಸುತ್ತಿದ್ದಾರೆ.

ಹಾಸನ ಬಿಜೆಪಿ ಶಾಸಕ ಪ್ರೀತಂ ಗೌಡ ಮನೆಗೆ ಮಾಜಿ ಸಚಿವ ಎ.ಮಂಜು ಭೇಟಿ ಹಿನ್ನಲೆ, ಶನಿವಾರ ಪ್ರಜ್ವಲ್ ರೇವಣ್ಣ ಬಿಜೆಪಿ ನಗರಸಭೆ ಸದಸ್ಯ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಇನ್ನೂ ಪ್ರಜ್ವಲ್ ರೇವಣ್ಷ ಸಮ್ಮುಖದಲ್ಲಿ ಹಾಸನ ನಗರಸಭೆ 13 ನೇ ವಾರ್ಡ್ ಬಿಜೆಪಿ ಸದಸ್ಯ ಕುಳ್ಳಮಂಜು ಜೆಡಿಎಸ್ ಗೆ ಸೇರ್ಪಡೆ ಕೊಂಡಿದ್ದಾರೆ.

ಹಾಸನದಲ್ಲಿ ಈಗ ಪಕ್ಷಾಂತರ ಪರ್ವ ಆರಂಭವಾಗಿದ್ದು, ಜೆಡಿಎಸ್ ಮಾಜಿ ಶಾಸಕ ಹೆಚ್. ಎಸ್ ಪ್ರಕಾಶ್ ಮನೆಯಲ್ಲಿ ಪ್ರಜ್ವಲ್ ರೇವಣ್ಣ ಜೆಡಿಎಸ್ ಕಾರ್ಯಕರ್ತರ ಜೊತೆ  ಮೀಟಿಂಗ್ ಕೂಡ ಮಾಡಲಾಗಿದೆ.

ತೀವ್ರ ಕುತೂಹಲ ಕೆರಳಿಸಿದ್ದ ಹಾಸನ ಲೋಕಸಭೆ ಚುನಾವಣೆಗೆ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್‌ ರೇವಣ್ಣ ಹೆಸರು ನಿರೀಕ್ಷೆಯಂತೆ ಘೋಷಣೆಯಾಗಿದೆ. ಇದರೊಂದಿಗೆ ಪ್ರಜ್ವಲ್ ಚುನಾವಣಾ ಪ್ರಚಾರವನ್ನೂ ಆರಂಭಿಸಿದ್ದಾರೆ. ಬಿಜೆಪಿಯ ಸದಸ್ಯರು ಕೂಡ ಪ್ರಜ್ವಲ್ ರೇವಣ್ಣಗೆ ಬೆಂಬಲ ನೀಡುತ್ತಿದ್ದು ಇದೀಗ ಹಾಸನ ಲೋಕಸಭೆ ಚುನಾವಣೆ ಮತ್ತಷ್ಟು ಕುತೂಹಲ ಮೂಡಿಸಿದೆ.