‘ಶೋಭಾ ಕರಂದ್ಲಾಜೆ ಮಣಿಸಲು ಜೆಡಿಎಸ್ ಮಾಡ್ತು ಆಪರೇಷನ್ ಹಸ್ತ’

ಚಿಕ್ಕಮಗಳೂರು: ಲೋಕಸಭಾ ಚುನಾವಣೆ ಸಮರದಲ್ಲಿ ಚಿಕ್ಕಮಗಳೂರು-ಉಡುಪಿ ಕ್ಷೇತ್ರದಲ್ಲಿ ಕಾಂಗ್ರೆಸ್ ಜೆಡಿಎಸ್ ನಿಂದ ಪ್ರಬಲ ಅಭ್ಯರ್ಥಿ ಅವಶ್ಯಕತೆ ಇರುವಾಗಲೇ ತೆನೆ ನಾಯಕರು ಆಪರೇಷನ್ ಹಸ್ತ ಮಾಡಿದ್ದಾರೆ.

ಚಿಕ್ಕಮಗಳೂರು-ಉಡುಪಿ ಕ್ಷೇತ್ರ ಬಿಜೆಪಿಯ ಭದ್ರಕೋಟೆ ಇದನ್ನ ಭೇದಿಸಲು ಮೈತ್ರಿ ನಾಯಕರು ರಣತಂತ್ರ ರೂಪಿಸಿ ಜೆಡಿಎಸ್​ನಿಂದ ಪ್ರಮೋದ್ ಮದ್ವರಾಜ್ ಕಣಕ್ಕೆ ಇಳಿಸಲು ಚಿಂತನೆ ನಡೆಸಿದ್ದಾರೆ. ಮಾಜಿ ಸಚಿವ ಲೋಕ ಸಮರದ ಅಭ್ಯರ್ಥಿಯಾಗುವ ಎಲ್ಲ ಸಾಧ್ಯತೆಗಳು ದಟ್ಟವಾಗಿದ್ದು ಕಾಂಗ್ರೆಸ್ ಕೂಡ ಇದಕ್ಕೆ ಬೆಂಬಲ ಸೂಚಿಸುವ ಲಕ್ಷಣಗಳು ಎದ್ದುಕಾಣುತ್ತಿವೆ.

ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ರು ಚಿಕ್ಕಮಗಳೂರು ಕ್ಷೇತ್ರದಲ್ಲಿ ಪ್ರಮೋದ್ ಮದ್ವರಾಜ್ ವರ್ಚಸ್ ಉಳಿಸಿಕೊಂಡಿದ್ದು , ನಿನ್ನೆ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರೊಟ್ಟಿಗೆ ಈ ಬಗ್ಗೆ ಮಾತುಕತೆ ನಡೆಸಲಾಗಿದೆ. ಅದುವಲ್ಲದೇ ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡ ಇದಕ್ಕೆ ಸಮ್ಮತಿ ಸೂಚಿಸಿದ್ದಾರೆ.

ಇನ್ನು ಮಾಜಿ ಸಚಿವ ಪ್ರಮೋದ್ ಮದ್ವರಾಜ್ ಕಾಂಗ್ರೆಸ್​ನಿಂದ ಜೆಡಿಎಸ್​ಗೆ ಅಧಿಕೃತವಾಗಿ ಶೀಘ್ರದಲ್ಲೆ ಸೇರ್ಪಡೆ ಆಗಲಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿವೆ.

ಸದ್ಯ ಆಪರೇಷನ್ ಹಸ್ತ ಸಕ್ಸಸ್ ಆಗಿದ್ದೆ ಆದ್ರೆ, ಚಿಕ್ಕಮಗಳೂರು-ಉಡುಪಿ ಕ್ಷೇತ್ರದಿಂದ ಆಯ್ಕೆಯಾಗಿರುವ ಬಿಜೆಪಿ ಹಾಲಿ ಸಂಸದೆ ಶೋಭಾ ಕರಂದ್ಲಾಜೆಗೆ ಮತ್ತೆ ಇದೇ ಕ್ಷೇತ್ರದಿಂದ ಟಿಕೆಟ್ ಸಿಗುವುದು ಪಕ್ಕ ಆಗಿದೆ. ಈ ಸಲ ಶೋಭಾ ಕರಂದ್ಲಾಜೆ ಮಣಿಸಲು ಮೈತ್ರಿ ಸರ್ಕಾರ ಭರ್ಜರಿ ತಯಾರಿ ಮಾಡಿಕೊಂಡು ಪ್ರಮೋದ್ ಮದ್ವರಾಜ್ ಕಣಕ್ಕೆ ಇಳಿಸಿದ್ರೆ ಬಿಜೆಪಿಗೆ ಗೆಲುವು ಅಷ್ಟು ಸುಲಭವಲ್ಲ ಎಂದು ಹೇಳಲಾಗುತ್ತಿದೆ.

Recommended For You

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.