ಪ್ರಜ್ವಲ್ ರೇವಣ್ಣ ಭೇಟಿ ಮಾಡಿ ಕಳಿಸಿದ ತಕ್ಷಣ ಮಾಜಿ ಸಿಎಂ ಮಾಡಿದ ಕೆಲಸ ನೋಡಿ..!

ಬೆಂಗಳೂರು: ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಿ ಚುನಾವಣೆ ಪ್ರಚಾರದ ಬಗ್ಗೆ ಮಾತುಕತೆ ನಡೆಸಿದ್ದಾರೆ.

ಬೆಂಗಳೂರಿನಲ್ಲಿರುವ ಸಿದ್ದರಾಮಯ್ಯ ನಿವಾಸದಲ್ಲಿ ಭೇಟಿ ಮಾಡಿದ ಪ್ರಜ್ವಲ್ ರೇವಣ್ಣ, ಸಿದ್ದರಾಮಯ್ಯನವರ ಬೆಂಬಲ ಕೇಳಿಕೊಂಡಿದ್ದಾರೆ. ಹಾಸನದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಅಸಮಾಧಾನಗೊಂಡಿದ್ದು ಅವರುಗಳು ಮನವೊಲಿಸಿ ಕ್ಷೇತ್ರದಲ್ಲಿ ತಮ್ಮ ಗೆಲ್ಲುವಿಗೆ ಸಹಕಾರ ನೀಡುವಂತೆ ಪ್ರಜ್ವಲ್​ ರೇವಣ್ಣ ಮಾತುಕತೆ ನಡೆಸಿದ್ದಾರೆ.

ಇನ್ನು ಸಿದ್ದರಾಮಯ್ಯ ಕೂಡ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ್ದು, ಹಾಸನ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಇಂದು ನನ್ನನ್ನು ಭೇಟಿಯಾಗಿ ಮಾತುಕತೆ ನಡೆಸಿದರು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.

ಹಾಸನ ದೇವೇಗೌಡರಂತಹ ಮುತ್ಸದ್ದಿ ರಾಜಕಾರಣಿಗಳು ಪ್ರತಿನಿಧಿಸಿದ್ದ ಕ್ಷೇತ್ರ, ಆ ಕ್ಷೇತ್ರದಲ್ಲಿ  ದೇವೇಗೌಡರು ಸಾಕಷ್ಟು ಜನಪರ ಕೆಲಸಗಳನ್ನು ಮಾಡಿದ್ದಾರೆ. ಪ್ರಜ್ವಲ್ ರೇವಣ್ಣನವರಿಗೂ ಅದೇ ದಾರಿಯಲ್ಲಿ ಸಾಗುವಂತೆ  ಮಾರ್ಗದರ್ಶನ ನೀಡಿ, ಶುಭ ಹಾರೈಸಿದೆ ಎಂದು ಸಿದ್ದರಾಮಯ್ಯ ತಮ್ಮ ಟ್ವೀಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

Recommended For You

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.