‘ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಲಿದೆ’

ಕೊಪ್ಪಳದಿಂದ ಸ್ಪರ್ಧಿಸಲು ಶ್ರೀರಾಮುಲು ಮೇಲೆ ರಾಷ್ಟ್ರೀಯ ವರಿಷ್ಠರು ಒತ್ತಾಯ ಮಾಡಿದ್ದು, ಈ ಬಗ್ಗೆ ಮಾತನಾಡಿದ ಶ್ರೀರಾಮುಲು, ತಮಗೆ ಕೊಪ್ಪಳದಿಂದ ಸ್ಪರ್ಧಿಸಲು ಮನಸ್ಸಿಲ್ಲ ಎಂದಿದ್ದಾರೆ.

ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಲು ಹೋದರೆ, ಮತ್ತೆ ಮೊಳಕಾಲ್ಮೂರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಆದ್ರೆ ಆ ಕ್ಷೇತ್ರದಲ್ಲಿ ನನಗೆ ಒಳ್ಳೆ ಹೆಸರಿದೆ. ಹೀಗಾಗಿ ನಾನು ಸ್ಪರ್ಧಿಸೋದಕ್ಕಿಂತ ಬೇರೆಯವರಿಗೆ ಅವಕಾಶ ನೀಡಿ ಎಂದು ಹೇಳಿದ್ದಾರೆ.

ನಾನು ರಾಜ್ಯ ರಾಜಕಾರಣದಲ್ಲೇ ಇರುತ್ತೇನೆ. ಬೇಕಾದರೆ ಕೊಪ್ಪಳ ಲೋಕಸಭಾ ಕ್ಷೇತ್ರದ ಹೊಣೆ ಹೊರಲು ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ. ಅಲ್ಲದೇ, ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Recommended For You

Leave a Reply

Your email address will not be published. Required fields are marked *