‘ಮೂಡ್ ಅಂದ್ರೆ ಬೇರೆ ಕಣಪ್ಪ, ಮೂಡ್ ಬರೋದು ಬೇರೆ ಬೇರೆ ಕೆಲಸಗಳಿಗೆ’ – ಸಿದ್ದರಾಮಯ್ಯ

ಮೈಸೂರು: ಮೂಡ್ ಅಂದ್ರೆ ಏನು(?) ಮೂಡ್ ಅಂದ್ರೆ ಬೇರೆ ಕಣಪ್ಪ. ಮೂಡ್ ಬರೋದು ಬೇರೆ ಬೇರೆ ಕೆಲಸಗಳಿಗೆ ಈಗ ಇರೋದು ಜನರ ಅಭಿಪ್ರಾಯ ಅಷ್ಟೇ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮೂಡ್ ಬಗ್ಗೆ ಪಾಠ ಮಾಡಿದ್ದಾರೆ.

ಮೈಸೂರಿನಲ್ಲಿಂದು ಸುದ್ದಿಗಾರರೊಟ್ಟಿಗೆ ಮಾತನಾಡಿದ ಸಿದ್ದರಾಮಯ್ಯ, ಜನರು ಕಾಂಗ್ರೆಸ್ ಪರವಾಗಿ, ಮೈತ್ರಿ ಅಭ್ಯರ್ಥಿ ಪರವಾಗಿ ಕೆಲಸ ಮಾಡಲು ನಿರ್ಧಾರ ಮಾಡಿದ್ದಾರೆ. ಅದು ಮೂಡ್ ಅಲ್ಲ, ಅದು ಜನರ ಅಭಿಪ್ರಾಯ. ನೀವ್ ಯಾವ್ ಮೂಡ್ ಅಲ್ಲಿ ಕೇಳ್ತಿದ್ದೀರೋ ನನಗೆ ಗೊತ್ತಿಲ್ಲ, ಮೂಡ್ ಬೇರೆ, ಜನರ ಅಭಿಪ್ರಾಯ ಬೇರೆ ಎಂದು ಹಾಸ್ಯದ ರೂಪದಲ್ಲಿ ತಿಳಿಸಿದರು.

ಅಲ್ಲದೇ ಸಿದ್ದರಾಮಯ್ಯ ಮತ್ತೆ ಚುನಾವಣೆಯಲ್ಲಿ ಸ್ಪರ್ಧೆ ಮಾಡೋ ಬಗ್ಗೆ ಸುಳಿವು ಕೊಟ್ಟಿದ್ದು, ನಾನು ಕೇವಲ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾತ್ರ ಚುನಾವಣೆಯಲ್ಲಿ ನಿಲ್ಲಲ್ಲ ಅಂತಾ ಹೇಳಿದ್ದೆ. ನಾನು ಬೇರೆ ಕಡೆ ನಿಲ್ಲೋದಿಲ್ಲ ಅಂತಾ ಹೇಳಿದ್ದೀನಾ(?) ಇನ್ನೂ ಚುನಾವಣೆಗೆ ನಾಲ್ಕು ವರ್ಷ ಬಾಕಿ ಇದೆ. ಮುಂದೆ ನೋಡೋಣ ಬಿಡಿ. ನನಗೆ ಚಾಮುಂಡೇಶ್ಚರಿ ಕ್ಷೇತ್ರದ ಋಣ ಮುಗಿದಿದೆ ಎಂದರು.

ಐಟಿ ಕಚೇರಿ ಮುಂದೆ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ನನಗೂ ಐಟಿಯಿಂದ ನೋಟಿಸ್ ಬಂದಿದೆ. ಈಗಾಗಲೇ ಉತ್ತರ ಕೊಟ್ಟಿದ್ದೇನೆ. ನಾನು ಚುನಾವಣೆಯಲ್ಲಿ ಬಿಝಿ ಇದ್ದೇನೆ. ನಾನು ಉತ್ತರ ಕೊಡಲು 15 ದಿನಬೇಕು ಎಂದು ಉತ್ತರ ಕೊಟ್ಟಿದ್ದೇನೆ ಎಂದು ತಿಳಿಸಿದ್ದಾರೆ.

Recommended For You

Leave a Reply

Your email address will not be published. Required fields are marked *