ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ದೂರು ದಾಖಲು..!

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಇಂದು ಹೇಳಿಕೆಯೊಂದನ್ನ ನೀಡಿದ್ದು, ಈ ಹೇಳಿಕೆಯನ್ನ ವಿರೋಧಿಸಿ, ಬಿಎಸ್‌ವೈ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ.

ಕಾಂಗ್ರೆಸ್‌ಗೆ ಲಿಂಗಾಯತರು ಮತ ನೀಡಿದರೆ ಅಪರಾಧ ಮಾಡಿದಂತೆ ಎಂದು ಪ್ರಚಾರದ ವೇಳೆ ಯಡಿಯೂರಪ್ಪ ಹೇಳಿಕೆ ನೀಡಿದ್ದು, ಈ ಕಾರಣಕ್ಕೆ ರಾಜ್ಯ ಕಾಂಗ್ರೆಸ್‌ ನಾಯಕರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

ಸಮುದಾಯವನ್ನ ಪ್ರಚೋದಿಸುವ ಹೇಳಿಕೆ ನೀಡಿದ್ದಾರೆ. ಬಿಎಸ್‌ವೈ ಜಾತಿಯಾಧಾರಿತ ಪ್ರವೋಕ್ ಮಾಡಿದ್ದಾರೆ. ಇದೊಂದು ಸಂವಿಧಾನ ವಿರೋಧಿ ನಿಲುವಾಗಿದೆ. ಸುಪ್ರೀಂ ಕೋರ್ಟ್ ತೀರ್ಪನ್ನ ಉಲ್ಲಂಘಿಸಿದಂತಾಗಿದೆ. ಹೀಗಾಗಿ ಬಿಎಸ್ ವೈ ವಿರುದ್ಧ ಕ್ರಮ ಜರುಗಿಸಬೇಕೆಂದು ಕಾಂಗ್ರೆಸ್ಸಿಗರು ಚುನಾವಣಾ ಆಯೋಗಕ್ಕೆ ನೀಡಿದ ದೂರಿನಲ್ಲಿ ಉಲ್ಲೇಖವಾಗಿದೆ.

Recommended For You

Leave a Reply

Your email address will not be published. Required fields are marked *