ಸಿದ್ದರಾಮಯ್ಯ ಪ್ರಚಾರದ ವೇಳೆ ಮೋದಿ ಮೋದಿ ಘೋಷಣೆ: ಮುಜುಗರಕ್ಕೊಳಗಾದ ಮಾಜಿ ಸಿಎಂ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕುಂದಗೋಳ ವಿಧಾನಸಭೆ ಕ್ಷೇತ್ರದ ದ್ಯಾವನೂರು ಗ್ರಾಮದಲ್ಲಿ ಸಿದ್ದರಾಮಯ್ಯ ಪ್ರಚಾರ ಮಾಡುವಾಗ ಮೋದಿ ಬೆಂಬಲಿಗರು ಮೋದಿ ಮೋದಿ ಎಂದು ಘೋಷಣೆ ಕೂಗಿದ್ದು, ಸಿದ್ದರಾಮಯ್ಯ ಇರುಸು ಮುರುಸುಗೊಂಡಿದ್ದಾರೆ.

ಪ್ರಚಾರದ ವೇಳೆ ಬಿಜೆಪಿ ಕಾರ್ಯಕರ್ತರು ಮೋದಿ ಮೋದಿ ಎಂದು ಕೂಗಿದ್ದು, ಇದರಿಂದ ಮುಜುಗರಕ್ಕೊಳಗಾದ ಮಾಜಿ ಸಿಎಂ ಸಿದ್ದರಾಮಯ್ಯ, ಬಿಜೆಪಿ ಕಾರ್ಯಕರ್ತರನ್ನ ಇಲ್ಲಿಂದ ಕಳುಹಿಸುವಂತೆ ಪೊಲೀಸರಿಗೆ ಸೂಚಿಸಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಕೈ ಕೈ ಮಿಲಾಯಿಸಿದ್ದು, ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ.

Recommended For You

Leave a Reply

Your email address will not be published. Required fields are marked *