ಹಾಸನದಲ್ಲಿ ಕಾಂಗ್ರೆಸ್ ನಾಪತ್ತೆಯಾಗಿದೆ- ಪ್ರೀತಮ್ ಗೌಡ

ಹಾಸನ: ಹಾಸನದಲ್ಲಿ ಪ್ರೀತಮ್ ಗೌಡ ಸುದ್ದಿಗೋಷ್ಠಿ ನಡೆಸಿದ್ದು, ಹಾಸನ ಲೋಕಸಭಾ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ತಿಳಿಸಿದ್ದಾರೆ.

ಬಿಜೆಪಿಗೆ ಐದು ಲಕ್ಷಕ್ಕೂ ಹೆಚ್ಚುವರಿ ಮತಗಳು ಪಡೆದಿರೋದು ಒಂದು ದಾಪುಗಾಲು. ಹಾಸನ ಕ್ಷೇತ್ರದಲ್ಲಿ ಇದು ಪಕ್ಷದ ಉತ್ತಮ ಸಾಧನೆ. ನಮ್ಮ ಕ್ಷೇತ್ರದ ಎಲ್ಲಾ ಕಾರ್ಯಕರ್ತರು ಸೇರಿ ಉತ್ತಮ ಪಲಿತಾಂಶ ನೀಡಿದ್ದಾರೆಂದು ಹೇಳಿದ್ದಾರೆ.

ಅಲ್ಲದೇ, ಚುನಾವಣೆಯಲ್ಲಿ ಕಾಂಗ್ರೆಸ್ ಎಲ್ಲಿದೆ ಎಂದು ಹುಡುಕಬೇಕಿದೆ. ಬೇರೆ ಎಲ್ಲಾ ಕ್ಷೇತ್ರಗಳಲ್ಲಿ ಎರಡನೇ ಸ್ಥಾನದಲ್ಲಿ ಇದ್ದಾರೆ. ಆದ್ರೆ ಈ ಜಿಲ್ಲೆಯಲ್ಲಿ ಕಾಂಗ್ರೆಸ್ ನಾಪತ್ತೆಯಾಗಿದೆ. ಜಿಲ್ಲೆಯಲ್ಲಿ ಬಿಜೆಪಿ ಪ್ರಬಲಪಕ್ಷವಾಗಿ ಹೊರಹೊಮ್ಮಿದೆ. ಜಿಲ್ಲೆಯಲ್ಲಿ ಈಗ ಬಿಜೆಪಿ ಮತ್ತು ಜೆಡಿಎಸ್ ಎರಡೇ ಆಯ್ಕೆ ಇರೋದು. ಕಳೆದ ಚುನಾವಣೆಗಿಂತ ಈ ಚುನಾವಣೆಗೆ ನಮ್ಮಪಕ್ಷದ ಬೆಳವಣಿಗೆ ಹೆಚ್ಚಾಗಿದೆ ಎಂದು ಪ್ರೀತಮ್ ಸಂತಸ ವ್ಯಕ್ತಪಡಿಸಿದ್ದಾರೆ.

 

Recommended For You

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.