ಸಿಎಂ ಕುಮಾರಸ್ವಾಮಿಗೆ ಯಡಿಯೂರಪ್ಪ ಖಡಕ್ ಎಚ್ಚರಿಕೆ

ಬೆಂಗಳೂರು: ಸಮಯ ಬಂದರೆ ನಿಮ್ಮ ಗ್ರಾಮ ವಾಸ್ತವ್ಯ ನಡಯೋಕೆ ಬಿಡಲ್ಲ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ.

ಸಿಎಂ ಕುಮಾರಸ್ವಾಮಿಗೆ ಯಡಿಯೂರಪ್ಪ ಎಚ್ಚರಿಕೆ

ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಯಡಿಯೂರಪ್ಪ, ಪ್ರಧಾನಿ ನರೇಂದ್ರ  ಮೋದಿಗೆ ಓಟ್ ಹಾಕಿದ್ದೀರಿ ನನ್ನೇನ್ ಕೇಳ್ತೀರಿ ಹೋಗಿ ಎಂದಿದ್ದ ಮುಖ್ಯಮಂತ್ರಿಗಳ  ವಿರುದ್ದ ಯಡಿಯೂರಪ್ಪ ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಗೆದ್ದ ಕಾರಣ ಸಂಯಮ ಕಳೆದುಕೊಂಡು ಮಾತಾಡುತ್ತಿದ್ದಾರೆ

ಮುಖ್ಯಮಂತ್ರಿಗಳು ಈ ರೀತಿ ಸಂಯಮ ಕಳೆದುಕೊಳ್ತಿರೋದು ಇದೇ ಮೊದಲೇನಲ್ಲ, ಉತ್ತರ ಕರ್ನಾಟಕದ ಜನತೆ ಅಂದರೆ ಮುಖ್ಯಮಂತ್ರಿಗೆ ಆಗಿಬರಲ್ಲ, ಅವರ ಗ್ರಾಮ ವಾಸ್ತವ್ಯ ಬೂಟಾಟಿಕೆ ಎಂದು ಮತ್ತೆ ಸಾಬೀತು ಮಾಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಗೆದ್ದ ಕಾರಣ ಸಂಯಮ ಕಳೆದುಕೊಂಡು ಮಾತಾಡುತ್ತಿದ್ದಾರೆ. ಇದು ಅವರ ಕೊಳಕು ಮನಸ್ಸನ್ನು ಎತ್ತಿ ತೋರಿಸುತ್ತದೆ. ಜನ ಮೋದಿಗೆ ಓಟ್ ಹಾಕಿದರು ಎಂದು ಹೀಯಾಳಿಸಿ ಮಾತಾಡಿರೋದು ಸಿಎಂ ಸ್ಥಾನಕ್ಕೆ ಮಾಡಿದ ಅವಮಾನ ಎಂದರು.

ಸಮಯ ಬಂದರೆ ನಿಮ್ಮ ಗ್ರಾಮ ವಾಸ್ತವ್ಯವೂ ನಡೆಯದಂತೆ ನೋಡಿಕೊಳ್ಳುತ್ತೇವೆ

ಹಳ್ಳಿಗಳಲ್ಲಿ ನಿಷೇದಾಜ್ಞೆ ಜಾರಿ ಮಾಡಿ ಜನರ ಭಾವನೆ ಹತ್ತಿಕ್ಕಿ ಗ್ರಾಮ ವಾಸ್ತವ್ಯ ಮಾಡ್ತಿರೋದು ಪ್ರಜಾಪ್ರಭುತ್ವ ವಿರೋಧಿ ಹಾಗೂ ಜನ ವಿರೋಧಿ ಕ್ರಮವಾಗಿದೆ. ನಿಮ್ಮ ವರ್ತನೆ ದೌರ್ಜನ್ಯದಿಂದ ಕೂಡಿದೆ. ಈ ರೀತಿ ಜನರ ಮೇಲೆ ದೌರ್ಜನ್ಯ ಮಾಡಿದರೆ ಬಿಜೆಪಿ ಸಹಿಸಲ್ಲ, ನಾವು ರಾಜ್ಯವ್ಯಾಪಿ ಆಂದೋಲನ ಹಮ್ಮಿಕೊಳ್ಳುತ್ತೇವೆ.  ಸಮಯ ಬಂದರೆ ನಿಮ್ಮ ಗ್ರಾಮ ವಾಸ್ತವ್ಯವೂ ನಡೆಯದಂತೆ ನೋಡಿಕೊಳ್ಳುತ್ತೇವೆ ಎಂದು  ಕುಮಾರಸ್ವಾಮಿಗೆ ಯಡಿಯೂರಪ್ಪ ಎಚ್ಚರಿಕೆ ನೀಡಿದರು.

Recommended For You

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.