Top

ಕುಮಾರಸ್ವಾಮಿ ಕೆಲಸ ಮೊಸರಲ್ಲಿ ಕಲ್ಲು ಹುಡುಕುವುದು..!

ಕುಮಾರಸ್ವಾಮಿ ಕೆಲಸ ಮೊಸರಲ್ಲಿ ಕಲ್ಲು ಹುಡುಕುವುದು..!
X

ಉಡುಪಿ: ಔರಾದ್ಕರ್ ವರದಿಗೆ ಎರಡು ಹಂತದಲ್ಲಿ ಸಚಿವ ಸಂಪುಟ ಒಪ್ಪಿಗೆ ಕೊಟ್ಟಿದೆ. ಹೀಗಾಗಿ ಖಂಡಿತವಾಗಿಯೂ ಔರಾದ್ಕರ್ ವರದಿ ಜಾರಿಯಾಗುತ್ತದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಶುಕ್ರವಾರ ಸ್ಪಷ್ಟನೆ ನೀಡಿದರು.

ನಗರದಲ್ಲಿಂದು ಪೊಲೀಸರ ವೇತನ ಪರಿಷ್ಕರಣೆ ವಿಚಾರ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿನ ಸರ್ಕಾರ ಜೈಲು ಸಿಬ್ಬಂದಿ ಹಾಗೂ ಫೈಯರ್ ಫೋರ್ಸ್ ಬಿಟ್ಟು ಹೋಗಿತ್ತು. ಆದರೆ ನಮ್ಮ ಕ್ಯಾಬಿನೆಟ್​ನಲ್ಲಿ ಅದೆಲ್ಲದಕ್ಕೂ ಒಪ್ಪಿಗೆ ಕೊಟ್ಟಿದ್ದೇವೆ. ಆರ್ಥಿಕ ಇಲಾಖೆಯಿಂದ ಕೆಲವು ಸ್ಪಷ್ಟನೆ ಕೇಳಿದ್ದು, ಬಂದ ನಂತರ ಒಂದು ವಾರದೊಳಗೆ ಸ್ಪಷ್ಟವಾದ ಸುತ್ತೋಲೆ ಹೊರಡಿಸುತ್ತೇವೆ ಎಂದರು.

ಇನ್ನು ಸ್ವಾಮೀಜಿಗಳ ಫೋನ್ ಕೂಡಾ ಟ್ಯಾಪಿಂಗ್ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಎಲ್ಲಾ ಮಾಹಿತಿಗಳು ಸಿಬಿಐಗೆ ಗೊತ್ತಿರುತ್ತದೆ. ಅಧಿಕೃತವಾಗಿ ಯಾವುದೇ ಮಾಹಿತಿ ನಮಗೆ ಬಂದಿಲ್ಲ. ಗೃಹ ಸಚಿವನಾಗಿ ಊಹಾಪೋಹಗಳಿಗೆ ಉತ್ತರ ಕೊಡಲಾರೆ. ಎಸ್​ಐಟಿ ಮಾಡಿರುವ ತನಿಖೆಯ ಸಂಪೂರ್ಣ ವಿವರವನ್ನು ಸಿಬಿಐಗೆ ನೀಡಿದ್ದೇವೆ ಎಂದು ಅವರು ತಿಳಿಸಿದರು.

ಪ್ರಭಾವ ಬಳಸಿ ಉಪಚುನಾವಣೆ ಮುಂದೂಡಲಾಗಿದೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಮಾತನಾಡಿ, ಕುಮಾರಸ್ವಾಮಿ ಅವರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ. ಅನುಮತಿ ಇಲ್ಲದೆ ಯಾವುದೇ ವ್ಯಕ್ತಿಯ ಖಾಸಗಿ ಮಾತುಕತೆಯ ಕದ್ದಾಲಿಕೆ ಮಾಡುವುದು ತಪ್ಪು ಎಂದು ಬಸವರಾಜ್ ಬೊಬ್ಬಾಯಿ ತಿರುಗೇಟು ನೀಡಿದರು.

Next Story

RELATED STORIES