Top

ಸಿಎಂ ಬಿಎಸ್​ವೈ ಭೇಟಿ ಮಾಡಿದ ಕಾಂಗ್ರೆಸ್​ ಶಾಸಕ: ರಾಜಕೀಯ ವಲಯದಲ್ಲಿ ಕುತೂಹಲ

ಸಿಎಂ ಬಿಎಸ್​ವೈ ಭೇಟಿ ಮಾಡಿದ ಕಾಂಗ್ರೆಸ್​ ಶಾಸಕ: ರಾಜಕೀಯ ವಲಯದಲ್ಲಿ ಕುತೂಹಲ
X

ಬೆಂಗಳೂರು: ಸಿಎಂ ಬಿಎಸ್​ ಯಡಿಯೂರಪ್ಪ ಅವರ ಜೊತೆ ಬಿಟಿಎಂ ಲೇಔಟ್ ಮತ್ತು ಜಯನಗರ ಕ್ಷೇತ್ರಗಳ ಅನುದಾನ ಸಂಬಂಧದ ವಿಷಯವಾಗಿ ಚರ್ಚೆ ಮಾಡಿದ್ದೇನೆ ಎಂದು ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರು ಶನಿವಾರ ಹೇಳಿದರು.

ನಗರದ ಡಾಲರ್ಸ್​​ ಕಾಲೋನಿಯಲ್ಲಿರುವ ಸಿಎಂ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅವರು, ನನ್ನ, ನನ್ನ ಮಗಳ ಕ್ಷೇತ್ರ, ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ಅನುದಾನ ಕಡಿತ ಆಗಿದೆ. ಅನುದಾನ ಕಡಿತ ಮಾಡಬೇಡಿ ಮುಂದುವರೆಸಿ ಅಂತ ಕೇಳಿದ್ದೇನೆ ಎಂದರು.

ಇನ್ನು ಮೈತ್ರಿ ಅವಧಿಯಲ್ಲಿ ನಮ್ಮ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡಿತ್ತು. ಬಿಜೆಪಿ ಸರ್ಕಾರ ಬಂದ ಮೇಲೆ ನಮ್ಮ ಅನುದಾನಗಳಲ್ಲಿ ಕಡಿತ ಮಾಡಲಾಗಿದೆ. ಈ ಸಂಬಂಧ ನಾವು ಪ್ರತಿಭಟನೆ ಸಹ ಮಾಡಿದ್ದೆವು ಎಂದು ಅವರು ತಿಳಿಸಿದರು.

ಇನ್ನು ಬಿಜೆಪಿ ಸರ್ಕಾರಕ್ಕೆ ನೂರು ದಿನ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ರಾಮಲಿಂಗಾರೆಡ್ಡಿ ಅವರು, ನೆರೆ ವಿಚಾರದಲ್ಲಿ ಕೇಂದ್ರ ಸರ್ಕಾರ ಸಹಕಾರ ಕೊಟ್ಟಿಲ್ಲ, ಕೇಂದ್ರ ಸಹಕಾರ ಕೊಟ್ಟಿದರೆ ರೈತರ ಸಮಸ್ಯೆ ನೀಗುತ್ತಿತ್ತು. ಕೇಂದ್ರ-ರಾಜ್ಯಕ್ಕೆ ಹೆಚ್ಚಿನ ಅನುದಾನ ಕೊಡಬೇಕಿತ್ತು ಮೋದಿ ಸರ್ಕಾರದಿಂದ ಮಲತಾಯಿ ಧೋರಣೆ ಆಗಿದೆ. , ಕೇಂದ್ರ ಸರ್ಕಾರ ಸಹಕಾರ ಕೊಟ್ಟರೆ ಮಾತ್ರ ರಾಜ್ಯ ಸರ್ಕಾರ ಸಾಧನೆ ಮಾಡಲು ಸಾಧ್ಯ. ಇಲ್ಲದಿದರೆ ರಾಜ್ಯ ಸರ್ಕಾರಕ್ಕೆ ಕಷ್ಟ ಆಗುತ್ತೆ ಎಂದು ಅವರು ಹೇಳಿದ್ದಾರೆ.

ಸಿಎಂ ಬಿಎಸ್​ವೈ ಜೊತೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಭೇಟಿ ವಿಚಾರದ ಬಗ್ಗೆ ಮಾತನಾಡಿದ ಕಾಂಗ್ರೆಸ್​ ಶಾಸಕ, ಅದು ನನಗೆ ಗೊತ್ತಿಲ್ಲ, ಅವರಿಬ್ಬರೂ ಖಾಸಗಿ ಕಾರ್ಯಕ್ರಮದಲ್ಲಿ ಭೇಟಿ ಮಾಡಿದರೆ ತಪ್ಪೇನಿದೆ(?) ನಾನು ಇವತ್ತು ಸಿಎಂ ಭೇಟಿ ಮಾಡಿದ್ದೇನೆ. ಇದಕ್ಕೂ ರಾಜಕೀಯ ಬಣ್ಣ ಕಟ್ಟೋಕಾಗುತ್ತಾ(?) ಎಂದು ಅವರು ನುಡಿದರು.

ಅಂತೆಯೇ ಸರ್ಕಾರದ ಸಾಧನೆ ಶೂನ್ಯ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿದ ರಾಮಲಿಂಗಾರೆಡ್ಡಿ ಅವರು, ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರು. ವಿಪಕ್ಷ ನಾಯಕರಿಗೆ ಅಂಕಿ ಅಂಶ ಚೆನ್ನಾಗಿ ಗೊತ್ತಿರುತ್ತದೆ ಎಂದು ಸಿದ್ದರಾಮಯ್ಯ ಆರೋಪವನ್ನು ಸಮರ್ಥಿಸಿಕೊಂಡರು.

Next Story

RELATED STORIES