Top

'ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಯಾಗಿದ್ದೇನೆ' - ಸತೀಶ್​ ಜಾರಕಿಹೊಳಿ

ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಯಾಗಿದ್ದೇನೆ - ಸತೀಶ್​ ಜಾರಕಿಹೊಳಿ
X

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ನೇಮಕ ಗೊಂದಲ ಬಗ್ಗೆ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್​ ಶಾಸಕ ಸತೀಶ್ ಜಾರಕಿಹೊಳಿ ಅವರು, ನಾನು ಸಮರ್ಥನಿದ್ದೇನೆ ಎಂದು ಹೇಳುವ ಮೂಲಕ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳಿಗೆ ಶಾಕ್​ ನೀಡಿದ್ದಾರೆ.

ನಗರದಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಅವರು, ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿಯಾಗಿದ್ದೇನೆ. ಅಧ್ಯಕ್ಷ ಸ್ಥಾನವನ್ನು ಎಲ್ಲರೂ ಕೇಳುತ್ತಿದ್ದಾರೆ ಎಂದು ಅವರು ತಿಳಿಸಿದರು.

ಇನ್ನೂ ಗೊತ್ತಿಲ್ಲ ಯಾರಿಗೆ ಕೊಡಬೇಕು ಅನ್ನೋದು. ಯಾರಿಗೆ ಕೊಡಬೇಕು ಅಂತ ಅಳೆದುತೂಗಿ ನೋಡ್ತಾರೆ. ಎಲ್ಲವನ್ನೂ ಲೆಕ್ಕಾಚಾರ ಹಾಕಿ ಹೈಕಮಾಂಡ್ ನಿರ್ಧರಿಸುತ್ತೆ. ನಾನು ಹೈಕಮಾಂಡ್ ಭೇಟಿ ಮಾಡುವ ಪ್ರಶ್ನೆಯಿಲ್ಲ ಎಂದು ನುಡಿದರು.

ಸದ್ಯ ನಾಲ್ಕು ಕಂದಾಯ ವಿಭಾಗಗಳಿಗೆ ಕಾರ್ಯಾಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗುತ್ತಿದೆ. ಯಾವುದನ್ನು ಕೊಟ್ಟರೂ ನಾನು ಸಮರ್ಥವಾಗಿ ನಿಭಾಯಿಸುತ್ತೇನೆ. ಕೊಟ್ಟರೆ ಉತ್ತರ ಕರ್ನಾಟಕ ಭಾಗಕ್ಕೆ ಅವಕಾಶ ನೀಡಿದಂತಾಗುತ್ತದೆ ಎಂದು ಸತೀಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಹೈಕಮಾಂಡ್​ಗೆ ಮೆಸೇಜ್ ರವಾನಿಸಿದ್ದಾರೆ.

Next Story

RELATED STORIES