ಬಿಜೆಪಿ ಆಡಳಿತವಿದ್ದರೂ ಕಾಂಗ್ರೆಸ್ಗೆ ಹೆಚ್ಚು ಸ್ಥಾನ

X
TV5 Kannada11 Feb 2020 9:28 PM GMT
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದರೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಕ್ಷೇತ್ರಗಳಲ್ಲಿ ಗೆದ್ದು ಬೀಗಿದೆ. 5 ಜಿಲ್ಲೆಗಳಲ್ಲಿ ಭಾನುವಾರ ನಡೆದಿದ್ದ ಮತದಾನದ ಮತ ಎಣಿಕೆ ಇಂದು ನಡೆಯಿತು.
ವಿವಿಧ ಸ್ಥಳೀಯ ಸಂಸ್ಥೆಗಳ ಒಟ್ಟು 167 ವಾರ್ಡ್ಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 69 ರಲ್ಲಿ ಜಯಗಳಿಸುವ ಮೂಲಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
ಉಳಿದಂತೆ ಬಿಜೆಪಿ 59, ಜೆಡಿಎಸ್ 15 ವಾರ್ಡ್ಗಳಲ್ಲಿ ಜಯಗಳಿಸಿದೆ. ವಿಜಯಪುರದ ಸಿಂಧಗಿ ಪುರಸಭೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರಸಭೆ, ಮೈಸೂರು ಜಿಲ್ಲೆಯ ಹುಣಸೂರು ನಗರಸಭೆ, ಬಳ್ಳಾರಿ ಜಿಲ್ಲೆಯ ತೆಕ್ಕಲಕೋಟೆ ಪಟ್ಟಣ ಪಂಚಾಯಿತಿ ಹಾಗೂ ಸಿರಗುಪ್ಪ ನಗರಸಭೆಗೆ ಚುನಾವಣೆ ನಡೆದಿತ್ತು.
Next Story