'ಮುಂದಿನ ತಿಂಗಳು ಪರೀಕ್ಷಾ ವೇಳಾಪಟ್ಟಿ ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕ'

ಬೆಂಗಳೂರು: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿ ಮೂಲಕ ಮೇ 30ರೊಳಗೆ ಎಲ್ಲಾ ವಿಷಯವನ್ನು ಬೋಧಿಸಿ ಪರೀಕ್ಷೆ ನಡೆಸಲು ಮುಂದಾಗಿರುವ ಸರ್ಕಾರದ ನಿರ್ಧಾರ ಆತುರದ ಕ್ರಮ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಸಾಮಾಜಿಕ ಜಾಲತಾಣದಲ್ಲಿ ಹೇಳಿದ್ದಾರೆ.
ಶುಕ್ರವಾರ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಮುಂದಿನ ತಿಂಗಳು ಪರೀಕ್ಷಾ ವೇಳಾಪಟ್ಟಿಯನ್ನು ಘೋಷಿಸುವುದಾಗಿ ಸರ್ಕಾರ ನಿರ್ಧರಿಸಿರುವುದು ವಿಶೇಷವಾಗಿ ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗಲಿದೆ ಎಂದಿದ್ದಾರೆ.
ಬಹುತೇಕ ವಿಶ್ವವಿದ್ಯಾಲಯ ಹಾಗೂ ಪದವಿ ಕಾಲೇಜುಗಳು ಆನ್ ಲೈನ್ ತರಗತಿ ಆರಂಭಿಸಿವೆ. ಇದರಿಂದ ವಿಶೇಷವಾಗಿ ಗ್ರಾಮೀಣ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಕರೋನಾ ಸಂಕಷ್ಟ ಸಮಯದಲ್ಲಿ ಶುಲ್ಕ ಪಾವತಿಗೆ ಹೆಚ್ಚಿನ ಕಾಲಾವಕಾಶ ನೀಡುವಂತೆ ಆಗ್ರಹಿಸುತ್ತೇನೆ.
(4/4)
— H D Kumaraswamy (@hd_kumaraswamy) May 22, 2020
ಸರ್ಕಾರ ಈ ಬಗ್ಗೆ ಮರು ಚಿಂತನೆ ನಡೆಸುವ ತುರ್ತು ಅಗತ್ಯವಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ನೆಟ್ವರ್ಕ್ ಸಮಸ್ಯೆಯಿಂದ ಆನ್ಲೈನ್ ತರಗತಿ ಪಠ್ಯ ಆಲಿಸುವುದು ಕಷ್ಟ. ಪ್ರತೀ ವಿದ್ಯಾರ್ಥಿಯೂ ಕೂಡ ಆನ್ಲೈನ್ ಮುಖಾಂತರ ಪರಿಪೂರ್ಣವಾಗಿ ಕಲಿಯಲು ಸಾಧ್ಯವಿಲ್ಲ ಎಂದು ಸರ್ಕಾರದ ಆನ್ಲೈನ್ ತರಗತಿ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ.
ಬಹುತೇಕ ವಿಶ್ವವಿದ್ಯಾಲಯ ಹಾಗೂ ಪದವಿ ಕಾಲೇಜುಗಳು ಆನ್ಲೈನ್ ತರಗತಿ ಆರಂಭಿಸಿವೆ. ಇದರಿಂದ ವಿಶೇಷವಾಗಿ ಗ್ರಾಮೀಣ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಕೊರೊನಾ ಸಂಕಷ್ಟ ಸಮಯದಲ್ಲಿ ಶುಲ್ಕ ಪಾವತಿಗೆ ಹೆಚ್ಚಿನ ಕಾಲಾವಕಾಶ ನೀಡುವಂತೆ ಆಗ್ರಹಿಸುತ್ತೇನೆ ಎಂದು ಹೆಚ್.ಡಿ ಕುಮಾರಸ್ವಾಮಿ ಅವರು ಟ್ವಟಿರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.