'13 ಸೊನ್ನೆಗಳಲ್ಲಿ ಯಾರಿಗೆ ಯಾವ 'ಸೊನ್ನೆ' ಸಿಗಲಿದೆ ಎಂಬುದು ಪ್ರಶ್ನೆಯಾಗಿದೆ'

ಬೆಂಗಳೂರು: ಅಪ್ಪಟ ಸುಳ್ಳು, ಅತಿರಂಜಿತ ವಿಷಯಗಳನ್ನೇ ಮುಂದಿಟ್ಟುಕೊಂಡು ಜನರನ್ನು ವಂಚಿಸುವ ಆಡಳಿತದ ಮುಂದುವರಿದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಕೊರೊನಅ ಪರಿಹಾರ ಪ್ಯಾಕೇಜ್ ನಮ್ಮ ಮುಂದಿದೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟ್ವಿಟರ್ನಲ್ಲಿ ಬರೆದುಕೊಂಡಿದ್ದಾರೆ.
ಗುರುವಾರ ತಮ್ಮ ಅಧಿಕೃತ ಟ್ವಿಟರ್ ಖಾತೆ ಬರೆದುಕೊಂಡಿರುವ ಅವರು, ಹೀಗಾಗಿ 20 ಲಕ್ಷ ಕೋಟಿಯಲ್ಲಿರುವ 13 ಸೊನ್ನೆಗಳಲ್ಲಿ ಯಾರಿಗೆ ಯಾವ ‘ಸೊನ್ನೆ’ ಸಿಗಲಿದೆ ಎನ್ನುವುದು ಈಗ ಮೂಡಿರುವ ಪ್ರಶ್ನೆಯಾಗಿದೆ ಎಂದು ಪಿಎಂ ಮೋದಿ ಅವರು ವಿಶೇಷ ಆರ್ಥಿಕ ಪ್ಯಾಕೇಜ್ ಬಗ್ಗೆ ವ್ಯಂಗ್ಯ ಭರಿತವಾಗಿ ಟ್ವಿಟ್ ಮಾಡಿದ್ದಾರೆ.
ಅಪ್ಪಟ ಸುಳ್ಳು, ಅತಿರಂಜಿತ ವಿಷಯಗಳನ್ನೇ ಮುಂದಿಟ್ಟುಕೊಂಡು ಜನರನ್ನು ವಂಚಿಸುವ ಆಡಳಿತದ ಮುಂದುವರಿದ ಭಾಗವಾಗಿ @narendramodi ಅವರ ಕೋರೋನ ಪರಿಹಾರ ಪ್ಯಾಕೇಜ್ ನಮ್ಮ ಮುಂದಿದೆ
ಹೀಗಾಗಿ 20 ಲಕ್ಷ ಕೋಟಿಯಲ್ಲಿರುವ 13 ಸೊನ್ನೆಗಳಲ್ಲಿ ಯಾರಿಗೆ ಯಾವ ‘ಸೊನ್ನೆ’ ಸಿಗಲಿದೆ ಎನ್ನುವುದು ಈಗ ಮೂಡಿರುವ ಪ್ರಶ್ನೆಯಾಗಿದೆ.#6MahineKaNyayDoModiJi
— Siddaramaiah (@siddaramaiah) May 21, 2020
ವಿಶ್ವದ್ಯಂತ ಕೋವಿಡ್ 19 ಆರ್ಭಟ ಜೋರಾಗಿದ್ದು ಇದರಿಂದಾಗಿ ಆರ್ಥಿಕ ಪರಿಸ್ಥಿತಿ ಕುಂಠಿತಗೊಂಡಿದೆ. ಹೀಗಾಗಿ ದೇಶದ ಆರ್ಥಿಕತೆ ಮೇಲೆತ್ತಲು ಪ್ರಧಾನಿ ನರೇಂದ್ರ ಮೋದಿ ಅವರು ಕಳೆದವಾರಷ್ಟೇ 20 ಲಕ್ಷ ಕೋಟಿ ರೂ.ಗಳನ್ನು ಘೋಷಣೆ ಮಾಡಿದರು. ಇದರ ವಿವರಣೆಯನ್ನು ವಿತ್ತ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನೀಡಿದ್ದರು.