ಸರ್ಕಾರದ ಆದೇಶದಂತೆ ನಾಳೆ ಬೆಂಗಳೂರು ಸಂಪೂರ್ಣ ಲಾಕ್ಡೌನ್

X
TV5 Kannada23 May 2020 3:10 PM GMT
ಬೆಂಗಳೂರು: ನಾಳೆ ಸಂಪೂರ್ಣ ಲಾಕ್ಡೌನ್ ಹಿನ್ನೆಲೆ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅನಿಲ್ ಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದು, ಸರ್ಕಾರದ ಆದೇಶದಂತೆ ಭಾನುವಾರ ಬೆಂಗಳೂರಿನಲ್ಲಿ ಸಂಪೂರ್ಣ ಲಾಕ್ಡೌನ್ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ನಗರದಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಅವರು, ಯಾರು ಮನೆಯಿಂದ ಹೊರ ಬರಬಾರದು. ಅಗತ್ಯ ಸೇವೆ ಹೊರತುಪಡಿಸಿ ಉಳಿದಿದ್ದೆಲ್ಲವೂ ಬಂದ್ ಆಗಿರಲಿದೆ. ಲಾಕ್ಡೌನ್ 1.0 ಹೇಗಿತ್ತೋ, ಅದೇ ರೀತಿ ಭಾನುವಾರ ಇರುತ್ತದೆ ಎಂದು ಅವರು ಹೇಳಿದರು.
ಮೆಡಿಕಲ್ಗೆ ಸಂಬಂಧಿಸಿದ ತುರ್ತು ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಎಲ್ಲಾ ಮಾರುಕಟ್ಟೆ ಕ್ಲೋಸ್ ಆಗಿರುತ್ತವೆ. ಸಾರ್ವಜನಿಕರು ಇದಕ್ಕೆ ಸಹಕಾರ ನೀಡಬೇಕು ಎಂದು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಅವರು ಮನವಿ ಮಾಡಿಕೊಂಡಿದ್ದಾರೆ.
ಲಾಕ್ಡೌನ್ಗೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸರು ಮತ್ತು ಬಿಬಿಎಂಪಿಯವರು ಜಂಟಿಯಾಗಿ ಕಾರ್ಯನಿರ್ವಹಣೆ ಮಾಡಲಿದ್ದಾರೆ.
Next Story