Top

'ದುಷ್ಕೃತ್ಯದಲ್ಲಿ ಪಾಲ್ಗೊಂಡವರ ಫ್ಯಾಮಿಲಿಗೆ ಸರ್ಕಾರಿ ಸವಲತ್ತು ರದ್ದು ಮಾಡಬೇಕು'

ದುಷ್ಕೃತ್ಯದಲ್ಲಿ ಪಾಲ್ಗೊಂಡವರ ಫ್ಯಾಮಿಲಿಗೆ ಸರ್ಕಾರಿ ಸವಲತ್ತು ರದ್ದು ಮಾಡಬೇಕು
X

ಬೆಂಗಳೂರು: ಡಿ.ಜೆ ಹಳ್ಳಿ ಘಟನೆ ಬಹಳ ದುರಾದೃಷ್ಟಕರವಾದದ್ದು, ಪೊಲೀಸ್ ಠಾಣೆಗೆ ನುಗ್ಗಿ ಗಲಾಟೆ ಮಾಡಿದ್ದಾರೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಶುಕ್ರವಾರ ಹೇಳಿದ್ದಾರೆ.

ನಗರದಲ್ಲಿರುವ ಬಿಜೆಪಿ ಕಚೇರಿಯಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಅವರು, ಮನೆಗೆ ನುಗ್ಗಿ ಬೆಂಕಿ ಹಚ್ಚಿದ್ದಾರೆ. ಕೋವಿಡ್ 19 ಸಂದರ್ಭದಲ್ಲಿ ದೇಶದ್ರೋಹಿ ಕೆಲಸಕ್ಕೆ ಕೈ ಹಾಕಿದ್ದಾರೆ ಎಂದರು.

ಇನ್ನು ಮಾಜಿ ಸಿಎಂ ಸಿದ್ದರಾಮಯ್ಯನವರು ಸೇರಿದಂತೆ ಕಾಂಗ್ರೆಸ್ ನಾಯಕರ ಹೇಳಿಕೆಗಳನ್ನು ನೋಡಿದರೆ ಆಶ್ಚರ್ಯ ಆಗುತ್ತದೆ. ಶಾಂತಿ ಸಭೆ ನಡೆಸಿ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಶಾಂತಿ ಸಭೆ ಯಾವುದಕ್ಕಾಗಿ ಮಾಡಬೇಕು(?) ಎಂದು ಪ್ರಶ್ನೆ ಮಾಡಿದರು.

ರಾಜ್ಯದಲ್ಲಿ ಅಶಾಂತಿ ಸೃಷ್ಟಿಸಿ, ಸರ್ಕಾರಕ್ಕೆ ಕಪ್ಪು ಮಸಿ ಬಳೆಯಲು ದುಷ್ಕೃತ್ಯಕ್ಕೆ ಕೈ ಹಾಕಿದ್ದಾರೆ. ದುಷ್ಕೃತ್ಯದಲ್ಲಿ ಪಾಲ್ಗೊಂಡವರ ಫ್ಯಾಮಿಲಿಗೆ ಸರ್ಕಾರಿ ಸೌವಲತ್ತು ರದ್ದು ಮಾಡಬೇಕು ಎಂದು ಬಿ.ವೈ ವಿಜಯೇಂದ್ರ ಅವರು ಹೇಳಿದ್ದಾರೆ.

Next Story

RELATED STORIES