Top

'ಅಖಂಡ ಶ್ರೀನಿವಾಸ್ ಮೂರ್ತಿ ಮನೆಗೆ ಬೆಂಕಿ ಹಾಕಲು ಕಾಂಗ್ರೆಸ್​ನವರೇ ಕಾರಣ'

ಅಖಂಡ ಶ್ರೀನಿವಾಸ್ ಮೂರ್ತಿ ಮನೆಗೆ ಬೆಂಕಿ ಹಾಕಲು ಕಾಂಗ್ರೆಸ್​ನವರೇ ಕಾರಣ
X

ಬೆಂಗಳೂರು: ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್​ ಬೆಂಕಿ ಬಿದ್ದ ಮನೆಗೆ ಹೋಗಿ ಸಾಂತ್ವನ ಹೇಳಿಲ್ಲ, ಬೆಂಕಿ ಹಾಕಿದವರ ಮನೆಗೆ ಹೋಗಿ ಸಾಂತ್ವನ ಹೇಳಿದ್ದಾರೆ ಎಂದು ವಿಧಾನ ಪರಿಷತ್​ ಸದಸ್ಯ ಹೆಚ್​ ವಿಶ್ವನಾಥ್​ ಅವರು ಶುಕ್ರವಾರ ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮದ ಜೊತೆ ಮಾತನಾಡಿದ ಅವರು, ಪಾದರಾಯನಪುರ ವಿಚಾರದಲ್ಲಿ ಜೈಲಿಗೆ ಹೋಗಿ ಬಂದವರನ್ನ ಮಾಲೆ ಹಾಕಿ ಸ್ವಾಗತಿಸಿದರು. ಇವರೇನು ಸ್ವಾತಂತ್ರ್ಯ ಹೋರಾಟ ಮಾಡಲು ಹೋಗಿದ್ರಾ(?) ಎಂದು ಅವರು ಕಾಂಗ್ರೆಸ್​ ನಾಯಕರಿಗೆ ಪ್ರಶ್ನೆ ಮಾಡಿದ್ದಾರೆ.

ಇನ್ನು ಬೆಂಗಳೂರು ಕೆ.ಜಿ ಹಳ್ಳಿಯಲ್ಲಿ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಬೆಂಗಳೂರಿನಲ್ಲಿ ನಡೆದ ಗಲಭೆ ಕಾಂಗ್ರೆಸ್ ಪಾಪದ ಕೂಸು. ಅಖಂಡ ಶ್ರೀನಿವಾಸ್ ಮೂರ್ತಿ ಮನೆಗೆ ಬೆಂಕಿ ಹಾಕಲು ಕಾಂಗ್ರೆಸ್​ನವರೇ ಕಾರಣ. ಈ ಘಟನೆಯಲ್ಲಿ ರಾಜಕೀಯ ನಡೆಯುತ್ತಿದೆ. ಕಾಂಗ್ರೆಸ್ ಹಾಗೂ ಅಲ್ಲಿನ ಸಂಘಟನೆಗಳ ಮಧ್ಯೆ ರಾಜಕೀಯ ಇದೆ. ಬಿಜೆಪಿಗೂ ಈ ಘಟನೆಗೆ ಯಾವುದೇ ಸಂಬಂಧವಿಲ್ಲ. ಇದರಲ್ಲಿ ಬಿಜೆಪಿಯವರು ಯಾವುದೇ ರಾಜಕೀಯ ಮಾಡುತ್ತಿಲ್ಲ ಎಂದು ಅವರು ಬಿಜೆಪಿಯನ್ನು ಸಮರ್ಥನೆ ಮಾಡಿಕೊಂಡಿದ್ದಾರೆ.

ಸದ್ಯ ಸಿಎಎ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಮಾಡಿದ ಪ್ರಚೋದನಾಕಾರಿ ಭಾಷಣ ಬಿಸಿ ಕೆಂಡವಾಗಿದೆ. ಅದನ್ನು ಹಾರಿಸುವ ಗೋಜಿಗೆ ಯಾರು ಹೋಗಿಲ್ಲ. ಅದೇ ಕೆಂಡವನ್ನು ಹಿಡಿದುಕೊಂಡು ಕಾಂಗ್ರೆಸ್​ನವರು ಮತ್ತೆ ರಾಜಕೀಯ ಮಾಡುವ ಪ್ರಯತ್ನ ನಡೆಯುತ್ತದೆ ಎಂದು ಹೆಚ್​ ವಿಶ್ವನಾಥ್​ ಅವರು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.

Next Story

RELATED STORIES