Top

ಸಿಎಂ ಬಿಎಸ್​ವೈ ಭೇಟಿ ಬಳಿಕ ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಪ್ರತಿಕ್ರಿಯೆ

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಬಿ.ಎಸ್​ ಯಡಿಯೂರಪ್ಪ ಅವರ ಭೇಟಿ ಬಳಿಕ ಮಾಧ್ಯಮದೊಂದಿಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮಾತನಾಡಿದರು.

ಸಿಎಂ ಬಿಎಸ್​ವೈ ಭೇಟಿ ಬಳಿಕ ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಪ್ರತಿಕ್ರಿಯೆ
X

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಮಳೆಯಿಂದಾಗಿ ಹೆಚ್ಚು ಹಾನಿ ಉಂಟಾಗುತ್ತಿದೆ. ವಿಶೇಷವಾಗಿ ನಮ್ಮ ದಾಸರಹಳ್ಳಿ ಶಾಸಕ ಮಂಜುನಾಥ್ ಕ್ಷೇತ್ರದಲ್ಲಿ ಬಹಳ ಹಾನಿ ಆಗಿತ್ತು ಎಂದು ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಅವರು ಶುಕ್ರವಾರ ಹೇಳಿದ್ದಾರೆ.

ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಬಿ.ಎಸ್​ ಯಡಿಯೂರಪ್ಪ ಅವರ ಭೇಟಿ ಮಾಡಿದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಾನು ಸಿಎಂ ಆಗಿದ್ದಾಗ ಅನುದಾನ ಕೊಟ್ಟಿದ್ದೆ, ಅದೂ ಬಿಡುಗಡೆ ಆಗಿರಲಿಲ್ಲ, ಅದರ ಬಗ್ಗೆ ಕೂಡಾ ಮನವಿ ಮಾಡಲು ಬಂದಿದ್ದೆ ಎಂದು ಅವರು ತಿಳಿಸಿದರು.

ಕಳೆದ ಕೆಲವು ದಿನಗಳಿಂದ ಡ್ರಗ್ಸ್ ಬಿಚಾರ ಕೂಡಾ ಹೆಚ್ಚು ಸದ್ದು ಮಾಡುತ್ತಿದೆ. ತನಿಖೆ ನಡೆಯುತ್ತಿದೆ ಅಂತ ಸಿಎಂ ಹೇಳಿದ್ದಾರೆ. ಬೇರೆ ಬೇರೆ ಕ್ಷೇತ್ರದವರು ಈ ಡ್ರಗ್ಸ್ ಜಾಲದಲ್ಲಿ ಇರಬಹುದು. ಯಾರೇ ಈ ಜಾಲದಲ್ಲಿ ಇದ್ದರೂ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದರು.

ಡ್ರಗ್ಸ್ ವಿಚಾರ ತನಿಖೆ ನಡೆಯುತ್ತಿದೆ. ಅದರಲ್ಲಿ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಸಿಎಂ ಕೂಡಾ ಹೇಳಿದ್ದಾರೆ. ನೋಡೋಣ ಯಾರ್ಯಾರ ಹೆಸರು ಹೊರಗೆ ಬರುತ್ತದೆ ಅಂತ ಎಂದು ಹೆಚ್​.ಡಿ ಕುಮಾರಸ್ವಾಮಿ ಅವರು ಮಾತನಾಡಿದ್ದಾರೆ.

Next Story

RELATED STORIES