Top

ಕೊರೊನಾ ರೂಲ್ಸ್​ಗೆ ಡೋಂಟ್​ಕೇರ್​: ಮಂಗಳೂರಿನಲ್ಲಿ ಅದ್ಧೂರಿ ಬ್ರಹ್ಮರಥೋತ್ಸವ

ಸಾಮಾಜಿಕ ಅಂತರವಿಲ್ಲದೇ, ಮಾಸ್ಕ್ ಇಲ್ಲದೇ ಭಾರೀ ಸಂಖ್ಯೆಯಲ್ಲಿ ಭಕ್ತರು ಭಾಗಿ

ಕೊರೊನಾ ರೂಲ್ಸ್​ಗೆ ಡೋಂಟ್​ಕೇರ್​: ಮಂಗಳೂರಿನಲ್ಲಿ ಅದ್ಧೂರಿ ಬ್ರಹ್ಮರಥೋತ್ಸವ
X

ದಕ್ಷಿಣ ಕನ್ನಡ: ರಾಜ್ಯದಾದ್ಯಂತ ಕೊರೊನಾ ಟಫ್​ರೂಲ್ಸ್​ ಜಾರಿಯಲ್ಲಿದ್ದರೂ ಸಹ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಮಂಗಳೂರಿನ ಸೋಮೇಶ್ವರ ಸೋಮನಾಥ ದೇವಸ್ಥಾನದಲ್ಲಿ ಬ್ರಹ್ಮರಥೋತ್ಸವ ನಡೆಸಲಾಗಿದೆ.

ಒಂದೆಡೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದರು ಸಹ ನಿನ್ನೆ ಸಾಮಾಜಿಕ ಅಂತರವಿಲ್ಲದೇ, ಮಾಸ್ಕ್ ಇಲ್ಲದೇ ಭಾರೀ ಸಂಖ್ಯೆಯಲ್ಲಿ ಭಕ್ತರು ಬ್ರಹ್ಮರಥೋತ್ಸವದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ.

ಇನ್ನು ನಿನ್ನೆ ಮಧ್ಯಾಹ್ನ ಅಧಿಕಾರಿಗಳು ದೇವಸ್ಥಾನಕ್ಕೆ ಭೇಟಿ ನೀಡಿ ಉತ್ಸವ ನಿಲ್ಲಿಸುವಂತೆ ಆದೇಶಿಸಿದ್ದರು, ಆದರೆ ದೇವಸ್ಥಾನದ ಆಡಳಿತ ಮಂಡಳಿ ಮಾತ್ರ ಜಿಲ್ಲಾಧಿಕಾರಿಗಳು ಹಾಗೂ ಅಧಿಕಾರಿಗಳ ಆದೇಶವನ್ನು ಮೀರಿ ನಿನ್ನೆ ರಾತ್ರಿ ಅದ್ಧೂರಿಯಾಗಿ ಬ್ರಹ್ಮರಥೋತ್ಸವ ನಡೆಸಿದ್ದಾರೆ.

Next Story

RELATED STORIES