Top

ಬಿಜೆಪಿಯ ಸಂಘಟನಾತ್ಮಕ ಕಾರ್ಯತಂತ್ರಗಳೆನ್ನೇ ಡಿಕೆಶಿ ಫಾಲೋ ಮಾಡುತ್ತಿದ್ದಾರೆ

ಸಿದ್ದರಾಮಯ್ಯ ವಿಚಾರವಾದಿ ನಾಯಕ ಇರಬಹುದು. ಆದರೆ, ಅವರು ಕೊಡವರ ಮತ್ತು ಹಿಂದುಗಳ ಭಾವನೆಗೆ ಧಕ್ಕೆ ಮಾಡುತ್ತಿದ್ದಾರೆ.

ಬಿಜೆಪಿಯ ಸಂಘಟನಾತ್ಮಕ ಕಾರ್ಯತಂತ್ರಗಳೆನ್ನೇ ಡಿಕೆಶಿ ಫಾಲೋ ಮಾಡುತ್ತಿದ್ದಾರೆ
X

ದಕ್ಷಿಣಕನ್ನಡ: ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ ವಿಚಲಿತರಾಗಿದ್ದಾರೆ, ಆತಂಕ ಗೊಂಡಿದ್ದಾರೆ ಕಾಂಗ್ರೆಸ್ ತನ್ನ ಅಸ್ತಿತ್ವ ಕಳೆದುಕೊಂಡಿದೆ ಎಂದು ಚಿಕ್ಕಮಗಳೂರು-ಉಡುಪಿ ಸಂಸದೆ ಶೋಭಾ ಕಂರದ್ಲಾಜೆ ಅವರು ಶನಿವಾರ ಹೇಳಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮದ ಮಿತ್ರರೊಂದಿಗೆ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳಿಂದ ಕಾಂಗ್ರೆಸ್ ವಿಚಲಿತಗೊಂಡಿದೆ. ಡಿ.ಕೆ ಶಿವಕುಮಾರ್ ಅಧ್ಯಕ್ಷರಾದ ಬಳಿಕ ಕಾಂಗ್ರೆಸ್ ಎಲ್ಲಾ ಚುನಾವಣೆಯಲ್ಲಿ ಸೋಲು ಕಂಡಿದೆ. ಇದರಿಂದ ವಿಚಲಿತರಾಗಿರುವ ಡಿಕೆಶಿ ರಾಜ್ಯ ಸರಕಾರದ ಮೇಲೆ ಇಲ್ಲ-ಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದರು.

ಸದ್ಯ ಡಿ.ಕೆ ಶಿವಕುಮಾರ್ ಅವರಿಗೆ ಜನ ಬೆಂಬಲವಿಲ್ಲ, ಕಾರ್ಯಕರ್ತರ ಬೆಂಬಲವೂ ಇಲ್ಲ. ಬಿಜೆಪಿಯ ಸಂಘಟನಾತ್ಮಕ ಕಾರ್ಯತಂತ್ರಗಳೆನ್ನೇ ಡಿಕೆಶಿ ಫಾಲೋ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರೇ ಡಿಕೆಶಿಯವರ ಕಾರ್ಯಶೈಲಿ ಒಪ್ಪುತ್ತಿಲ್ಲ ಇದನ್ನು ಮುಚ್ಚಿಕೊಳ್ಳಲು ಬಿಜೆಪಿ ಸರ್ಕಾರ, ಸಿಎಂ, ಪ್ರಧಾನ ಮಂತ್ರಿಗಳ ಮೇಲೆ ಇಲ್ಲ-ಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್​ ನಾಯಕರಯನ್ನು ಟೀಕಿಸಿದರು.

ಸದ್ಯ ಜನರು ಜಾಗ್ರತರಾಗಿದ್ದಾರೆ ಅವರನ್ನು ಮೂರ್ಖರನ್ನಾಗಿಸಲು ಸಾಧ್ಯವಿಲ್ಲ. ಸಿದ್ದರಾಮಯ್ಯ ವಿಚಾರವಾದಿ ನಾಯಕ ಇರಬಹುದು. ಆದರೆ, ಅವರು ಕೊಡವರ ಮತ್ತು ಹಿಂದುಗಳ ಭಾವನೆಗೆ ಧಕ್ಕೆ ಮಾಡುತ್ತಿದ್ದಾರೆ. ಕೊಡವರು ಗೋಮಾಂಸ ತಿಂತಾರೆ ಅಂತ ಅವರು ಹೇಳ್ತಾರೆ. ಒಂದು ಜನಾಂಗದ ಓಲೈಕೆಗೆ ಸಿದ್ದರಾಮಯ್ಯ ಭಾವನೆಗೆ ಧಕ್ಕೆ ತರ್ತಿದಾರೆ ಎಂದು ಸಿದ್ದರಾಮಯ್ಯ ಅವರು ಹೇಳಿಕೆ ವಿರೋಧ ವ್ಯಕ್ತಪಡಿಸಿದ್ದಾರೆ.

Next Story

RELATED STORIES