Top

ಮಂಗಳೂರಿನ ಸೋಮನಾಥ ದೇವಸ್ಥಾನ ಆಡಳಿತ ಮಂಡಳಿ ವಿರುದ್ಧ FIR

ಕೊರೊನಾ ನಿಯಮ ಉಲ್ಲಂಘಿಸಿ ರಥೋತ್ಸವ

ಮಂಗಳೂರಿನ ಸೋಮನಾಥ ದೇವಸ್ಥಾನ ಆಡಳಿತ ಮಂಡಳಿ ವಿರುದ್ಧ FIR
X

ಮಂಗಳೂರು: ಕೊರೊನಾ ನಿಯಮ ಉಲ್ಲಂಘಿಸಿ ರಥೋತ್ಸವ ನಡೆಸಿದ್ದ ಮಂಗಳೂರಿನ ಸೋಮೇಶ್ವರದ ಸೋಮನಾಥ ದೇವಸ್ಥಾನ ಆಡಳಿತ ಮಂಡಳಿ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಸೋಮೇಶ್ವರ ಪುರಸಭೆ ಪ್ರಬಂಧಕ ಕೃಷ್ಣ ಎಂಬವರ ದೂರಿನಡಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಆದೇಶದಂತೆ ದೇವಾಲಯದ ಆಡಳಿತ ಮಂಡಳಿ ಮತ್ತು ಅಧ್ಯಕ್ಷರ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಏಪ್ರಿಲ್​ 26ರಂದು ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಸೋಮೇಶ್ವರ ಸೋಮನಾಥ ದೇವಸ್ಥಾನದ ಆಡಳಿತ ಮಂಡಳಿ ಅದ್ಧೂರಿ ಬ್ರಹ್ಮರಥೋತ್ಸವ ನಡೆಸಿತ್ತು. ಜಿಲ್ಲಾಧಿಕಾರಿಗಳು ಹಾಗೂ ಅಧಿಕಾರಿಗಳ ಆದೇಶವನ್ನು ಮೀರಿ ಬ್ರಹ್ಮರಥೋತ್ಸವ ನಡೆಸಲಾಗಿದ್ದು, ಭಾರೀ ಸಂಖ್ಯೆಯಲ್ಲಿ ಭಕ್ತರು ಭಾಗಿಯಾಗಿದ್ದರು.

Next Story

RELATED STORIES