Top

ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ಆರೋಗ್ಯ ಸ್ಥಿತಿ ಗಂಭೀರ

ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿ, ಪ್ರಜ್ಞಾಹೀನ ಸ್ಥಿತಿಗೆ ತಲುಪಿದ ಆಸ್ಕರ್ ಫೆರ್ನಾಂಡಿಸ್

ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್  ಆರೋಗ್ಯ ಸ್ಥಿತಿ ಗಂಭೀರ
X

ಮಂಗಳೂರು: ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ.

ಆಸ್ಕರ್ ಫೆರ್ನಾಂಡಿಸ್ ಅವರು ಭಾನುವಾರ ಬೆಳಗ್ಗೆ ಯೋಗ ಮಾಡುವಾಗ ನಿಯಂತ್ರಣ ತಪ್ಪಿ ಜಾರಿ ಬಿದ್ದಿದ್ದರು. ಅದೇ ದಿನ ಸಂಜೆ ಡಯಾಲಿಸಿಸ್‌ಗೆಂದು ಮಂಗಳೂರಿನ ಯೆನೆಪೊಯ ಆಸ್ಪತ್ರೆಗೆ ತೆರಳಿದ್ದರು. ಈ ವೇಳೆ ಪರೀಕ್ಷಿಸಿದಾಗ ತಲೆಯ ಒಳಭಾಗಕ್ಕೆ ಪೆಟ್ಟು ಬಿದ್ದಿದ್ದು,ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದೆ ಎಂದು ವೈದ್ಯರ ಮಾಹಿತಿ ನೀಡಿದ್ದರು. ಸದ್ಯ ಅವರು ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನು ಆಸ್ಕರ್ ಫೆರ್ನಾಂಡಿಸ್​​ ಅವರ ಆರೋಗ್ಯ ಪರಿಸ್ಥಿತಿಯ ಬಗ್ಗೆ ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಕರೆ ಮಾಡಿ ವಿಚಾರಿಸಿದ್ದಾರೆ.

Next Story

RELATED STORIES