Top

ಕಾರ್ ಪಲ್ಟಿ: ಬೆಳಗಾವಿ ಸಂಚಾರಿ ಠಾಣೆಯ ಇನ್ಸ್​ಪೆಕ್ಟರ್​ ಸ್ಥಿತಿ ಗಂಭೀರ

ಇನ್ಸ್​ಪೆಕ್ಟರ್ ಸಂಬಂಧಿ ಸ್ಥಳದಲ್ಲೇ ಸಾವು

ಕಾರ್ ಪಲ್ಟಿ: ಬೆಳಗಾವಿ ಸಂಚಾರಿ ಠಾಣೆಯ ಇನ್ಸ್​ಪೆಕ್ಟರ್​ ಸ್ಥಿತಿ ಗಂಭೀರ
X

ಹುಬ್ಬಳ್ಳಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ಹುಬ್ಬಳ್ಳಿಯ ರಾಯನಾಳ ಬಳಿ ನಡೆದಿದೆ. ಘಟನೆಯಲ್ಲಿ ಬೆಳಗಾವಿ ಸಂಚಾರಿ ಠಾಣೆಯ ಇನ್ಸ್​ಪೆಕ್ಟರ್ ಮಹಾಬಳೇಶ್ವರ ನಾಯಕ್ ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಇನ್ಸ್​ಪೆಕ್ಟರ್ ಸಂಬಂಧಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನು ಹುಬ್ಬಳ್ಳಿಯ ವರೂರ ಬಳಿಯ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್​ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಹುಬ್ಬಳ್ಳಿ ತಾಲೂಕಿನ ಯಲವಗಿ ಗ್ರಾಮದ ನಿವಾಸಿ ಇರ್ಫಾನ್ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.

Next Story

RELATED STORIES