Top

ಕಿರಾಣಿ ಅಂಗಡಿಗಳಲ್ಲಿ ಬೆಂಕಿ ಅವಘಡ: ₹20 ಲಕ್ಷ ಮೌಲ್ಯದ ವಸ್ತುಗಳು ಭಸ್ಮ

ರಸಗೊಬ್ಬರ ಮಾರಟ ಮಳಿಗೆಯೂ ಬೆಂಕಿಗಾಹುತಿ

ಕಿರಾಣಿ ಅಂಗಡಿಗಳಲ್ಲಿ ಬೆಂಕಿ ಅವಘಡ: ₹20 ಲಕ್ಷ ಮೌಲ್ಯದ ವಸ್ತುಗಳು ಭಸ್ಮ
X

ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಕೋಳಿವಾಡ ಗ್ರಾಮದ ರಸಗೊಬ್ಬರ ಮಾರಾಟ ಮಳಿಗೆ ಹಾಗೂ ಕಿರಾಣಿ ಅಂಗಡಿಗಳಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, $20 ಲಕ್ಷ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ.

ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ಅಂಗಡಿಗಳು ಹೊತ್ತಿ ಉರಿದಿವೆ. ಬೆಂಕಿ ಆರಿಸಲು ಗ್ರಾಮಸ್ಥರು ಹರಸಾಹಸ ಪಡುತ್ತಿದ್ದು, ಟ್ಯಾಂಕರ್ ಮೂಲಕ ನೀರು ಪೂರೈಸಿ ಬೆಂಕಿ ಆರಿಸಿಲು ಪ್ರಯತ್ನಿಸುತ್ತಿದ್ದಾರೆ.

ಬೆಂಕಿ ಕೆನ್ನಾಲಿಗೆ ಎಲ್ಲೆಡೆ ವ್ಯಾಪಿಸುತ್ತಿದ್ದು, ಸುತ್ತಮುತ್ತಲಿನ ಮನೆಗಳಿಗೆ ಹರಡುವ ಸಾಧ್ಯತೆಗಳಿವೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಜನರು ಮನೆಗಳಿಂದ ಹೊರಬಂದಿದ್ದಾರೆ.

Next Story

RELATED STORIES