Top

ಪೈಪ್​ಲೈನ್​ ಕಾಮಗಾರಿ ವೇಳೆ ಮಣ್ಣು ಕುಸಿತ: ಕಾರ್ಮಿಕ ಸ್ಥಳದಲ್ಲೇ ಸಾವು

8 ಅಡಿಗೂ ಹೆಚ್ಚು ಕೆಳಗೆ ಇಳಿದು ಕೆಲಸ ಮಾಡುತ್ತಿದ್ದ ಕಾರ್ಮಿಕನ ದಾರುಣ ಸಾವು

ಪೈಪ್​ಲೈನ್​ ಕಾಮಗಾರಿ ವೇಳೆ ಮಣ್ಣು ಕುಸಿತ: ಕಾರ್ಮಿಕ ಸ್ಥಳದಲ್ಲೇ ಸಾವು
X

ಹುಬ್ಬಳ್ಳಿ: ಮಣ್ಣು ಕುಸಿತದಿಂದ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಕೊಪ್ಪಿಕರ ರಸ್ತೆಯಲ್ಲಿ ನಡೆದಿದೆ. ಕುಂದಗೋಳ ತಾಲೂಕಿನ ಯಲಿವಾಳ ಗ್ರಾಮದ ನಿವಾಸಿ ರವಿ ಯಲಿವಾಳ ಮೃತ ದುರ್ದೈವಿ.ಪೈಪಲೈನ್ ಅಳವಡಿಸುವ ಕಾಮಗಾರಿ ನಡೆಸುತ್ತಿರುವ ವೇಳೆ ಎಂಟು ಅಡಿಗೂ ಹೆಚ್ಚು ಕೆಳಗೆ ಇಳಿದು ಕೆಲಸ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಮಣ್ಣು ಕುಸಿದು ಕಾರ್ಮಿಕನ ಮೇಲೆ ಬಿದ್ದ ಪರಿಣಾಮ ರವಿ ಸ್ಥಳದಲ್ಲೇ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಘಟನೆ ಸಂಬಂಧ ಹುಬ್ಬಳ್ಳಿಯ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Next Story

RELATED STORIES