Top

ಆಟೋಗೆ ಲಾರಿ ಡಿಕ್ಕಿ: ಸ್ಥಳದಲ್ಲೇ ಇಬ್ಬರ ಸಾವು

ಆಟೋ ಚಾಲಕ ಹಾಗೂ ಪ್ರಯಾಣಿಕ ಸ್ಥಳದಲ್ಲೇ ಸಾವು

ಆಟೋಗೆ ಲಾರಿ ಡಿಕ್ಕಿ: ಸ್ಥಳದಲ್ಲೇ ಇಬ್ಬರ ಸಾವು
X

ಧಾರವಾಡ: ಆಟೋಗೆ ಲಾರಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಗಬ್ಬೂರು ಬೈಪಾಸ್ ಬಳಿ ನಡೆದಿದೆ.

ಹುಬ್ಬಳ್ಳಿಯಿಂದ ಗ್ರಾಮೀಣ ಭಾಗದತ್ತ ಹೊರಟಿದ್ದ ಆಟೋಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಹಾಗೂ ಪ್ರಯಾಣಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತ ದೇಹಗಳೆರಡು ಘಟನಾ ಸ್ಥಳದಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಪೂರ್ವ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Next Story

RELATED STORIES